ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 4:00 PM

ಚೆನ್ನೈ, ಅ.10: ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಸದ್ಯ ಇಬ್ಬರ ಮೃತದೇಹಗಳು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಿಯಲೂರು ಮತ್ತು ನೆರೆಯ ಪೆರಂಬಲೂರು ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಗೋಡೌನ್‌ನಲ್ಲಿ ಪಟಾಕಿ ಇಳಿಸುವ ಸಂದರ್ಭದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡ ಎರಡು ದಿನಗಳ ನಂತರ ಈ ಅಪಘಾತ ಸಂಭವಿಸಿದೆ.

ಇದು ತಮಿಳುನಾಡಿನ ಪಟಾಕಿ ಘಟಕದಲ್ಲಿ ನಡೆದ ನಾಲ್ಕನೇ ಸ್ಫೋಟವಾಗಿದೆ. ಜುಲೈನಲ್ಲಿ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ನಾಗಪಟ್ಟಣಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ 14 ಸಾವು: ಐವರ ವಿರುದ್ಧ ಎಫ್​​ಐಆರ್ ದಾಖಲು

ಕಳೆದ ವಾರವಷ್ಟೇ ಮೈಲಾಡುತುರೈ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Mon, 9 October 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್