AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಪಟಾಕಿ ಗೋದಾಮಿನಲ್ಲಿ ಸ್ಫೋಟ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು, ಮಾಲೀಕನ ಬಂಧನ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮಂಗಳವಾರ ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ, ಏಳು ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಪಟಾಕಿ ಗೋದಾಮಿನಲ್ಲಿ ಸ್ಫೋಟ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು, ಮಾಲೀಕನ ಬಂಧನ
ಬೆಂಕಿImage Credit source: India Today
ನಯನಾ ರಾಜೀವ್
|

Updated on: Jun 14, 2023 | 9:07 AM

Share

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮಂಗಳವಾರ ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ, ಏಳು ಮಂದಿ ಗಾಯಗೊಂಡಿದ್ದಾರೆ. ಗುನ್ನೌರ್ ಟೌನ್‌ಶಿಪ್‌ನಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗುಡ್ಡೋ (40), ಅನಮ್ (25), ಸುಮಯ್ಯ (12) ಮತ್ತು ಅಪರಿಚಿತ ಅಪ್ರಾಪ್ತ ಎಂದು ಗುರುತಿಸಲಾಗಿದೆ.

ಸರಾಯ್ ಪ್ರದೇಶದಲ್ಲಿ ಸಬೀರ್ ಅಲಿ ಅವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ:ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ

ಇದಲ್ಲದೆ, ಸ್ಫೋಟದಿಂದಾಗಿ ಇಡೀ ಗೋದಾಮು ಅಲುಗಾಡಿತ್ತು, ಇದರ ಪರಿಣಾಮ ಪರಿಣಾಮವಾಗಿ ಮೂರು ಜನರು ಸಾವನ್ನಪ್ಪಿದರು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ಇತರ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲೀಕ ಅಲಿ ಅವರು ಅನುಮತಿ ನೀಡಿದ ಸ್ಥಳವನ್ನು ಹೊರತುಪಡಿಸಿ ವಸತಿ ಪ್ರದೇಶದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದಾರೆ ಎಂದು ಎಸ್ಪಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ