ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮಂಗಳವಾರ ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ, ಏಳು ಮಂದಿ ಗಾಯಗೊಂಡಿದ್ದಾರೆ. ಗುನ್ನೌರ್ ಟೌನ್‌ಶಿಪ್‌ನಲ್ಲಿ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗುಡ್ಡೋ (40), ಅನಮ್ (25), ಸುಮಯ್ಯ (12) ಮತ್ತು ಅಪರಿಚಿತ ಅಪ್ರಾಪ್ತ ಎಂದು ಗುರುತಿಸಲಾಗಿದೆ.
ಸರಾಯ್ ಪ್ರದೇಶದಲ್ಲಿ ಸಬೀರ್ ಅಲಿ ಅವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಪಿಟಿಐಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ:ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ
ಇದಲ್ಲದೆ, ಸ್ಫೋಟದಿಂದಾಗಿ ಇಡೀ ಗೋದಾಮು ಅಲುಗಾಡಿತ್ತು, ಇದರ ಪರಿಣಾಮ ಪರಿಣಾಮವಾಗಿ ಮೂರು ಜನರು ಸಾವನ್ನಪ್ಪಿದರು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಇತರ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲೀಕ ಅಲಿ ಅವರು ಅನುಮತಿ ನೀಡಿದ ಸ್ಥಳವನ್ನು ಹೊರತುಪಡಿಸಿ ವಸತಿ ಪ್ರದೇಶದಲ್ಲಿ ಪಟಾಕಿಗಳನ್ನು ಸಂಗ್ರಹಿಸಿದ್ದಾರೆ ಎಂದು ಎಸ್ಪಿ ಚಕ್ರೇಶ್ ಮಿಶ್ರಾ ಹೇಳಿದ್ದಾರೆ. ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಯನ್ನು ಬಂಧಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ