ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ
ಕಾರಿಗೆ ಗುಂಡೇಟು ಬಿದ್ದಿರುವುದು
Follow us
TV9 Web
| Updated By: Lakshmi Hegde

Updated on:Feb 03, 2022 | 6:43 PM

ತಮ್ಮ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೂರು-ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಆರೋಪಿಸಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿರುವ ಕಿಥೌರ್​​ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್​ ದೆಹಲಿಗೆ ತೆರಳುತ್ತಿದ್ದಾಗ,  ದೆಹಲಿ-ಮೀರತ್ ಎಕ್ಸ್​​ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ ಎಂದು ಓವೈಸಿ ತಿಳಿಸಿದ್ದಾರೆ. 

ನಾನು ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುತ್ತಿದ್ದೆ. ಛಜರ್ಸಿ ಟೋಲ್​ ಪ್ಲಾಜಾ ಬಳಿ ಇಬ್ಬರು ಅಪರಿಚಿತರು ನನ್ನ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದರು. ಆದರೆ ಅವರು ಒಟ್ಟು 4 ಜನ ಇದ್ದರು. ಗಾಡಿಗೆ ಗುಂಡು ಬಿದ್ದಿದೆ. ಟೈಯರ್​ಗೂ ಗುಂಡು ತಗುಲಿದ ಪರಿಣಾಮ ಅದು ಪಂಕ್ಚರ್ ಆಯಿತು. ಬಳಿಕ ನಾನು ಇನ್ನೊಂದು ವಾಹನದಲ್ಲಿ ದೆಹಲಿಗೆ ಹೋದೆ ಎಂದು ಓವೈಸಿ ವಿವರಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಅಸಾದುದ್ದೀನ್ ಓವೈಸಿ ಕೂಡ ಫೋಟೋ ಶೇರ್ ಮಾಡಿಕೊಂಡು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಎರಡು ಗುಂಡುಗಳು ಅವರ ಕಾರಿಗೆ ತಗುಲಿ, ಅಲ್ಲಿ ತೂತು ಆಗಿದೆ. ಹಾಗೇ, ಇನ್ನೆರಡು ಗುಂಡುಗಳು ಟೈಯರ್​ಗೆ ತಗುಲಿದೆ ಎಂದು ಹೇಳಲಾಗಿದೆ.

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಹಾಗೇ, ಬಿಜೆಪಿ ವಕ್ತಾರ ಅನಿಲಾ ಸಿಂಗ್ ಕೂಡ ಘಟನೆ ನಿಜಕ್ಕೂ ಶಾಕಿಂಗ್ ಆಗಿದೆ ಎಂದಿದ್ದಾರೆ. ಈ ದಾಳಿ ನಡೆಸಿದವರನ್ನು ಜೈಲಿಗೆ ಕಳಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.10ರಿಂದ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅವರು ಇಂದು ಮೀರತ್​ಗೆ ಪ್ರಚಾರಕ್ಕೆ ತೆರಳಿ, ಅಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

Published On - 6:34 pm, Thu, 3 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ