ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ: ಎದುರಾಳಿಯಿಂದ ಗ್ಯಾಂಗ್​​ಸ್ಟರ್ ಜಿತೇಂದರ್ ಗೋಗಿ ಹತ್ಯೆ, 3 ಸಾವು

ಪ್ರಾಥಮಿಕ ಮಾಹಿತಿಯ ಪ್ರಕಾರ, ಗೋಗಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವಾಗ ಅವರ ಎದುರಾಳಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇತರ ಮೂವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ.

ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ: ಎದುರಾಳಿಯಿಂದ ಗ್ಯಾಂಗ್​​ಸ್ಟರ್ ಜಿತೇಂದರ್ ಗೋಗಿ ಹತ್ಯೆ, 3 ಸಾವು
ಸಾಂಕೇತಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Sep 24, 2021 | 3:19 PM

ದೆಹಲಿ:ದೆಹಲಿಯ ರೋಹಿಣಿ ನ್ಯಾಯಾಲಯದ (Rohini Court) ಆವರಣದಲ್ಲಿ ಜೈಲಿನಲ್ಲಿದ್ದ ಗ್ಯಾಂಗ್​​ಸ್ಟರ್ ಜಿತೇಂದರ್ ಗೋಗಿಯ ಹತ್ಯೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗೋಗಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವಾಗ ಅವರ ಎದುರಾಳಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇತರ ಮೂವರು ಸಾವಿಗೀಡಾಗಿದ್ದು ಕೆಲವರು ಗಾಯಗೊಂಡಿದ್ದಾರೆ.

ಗೋಗಿಯನ್ನು ಏಪ್ರಿಲ್‌ನಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆ (MCOCA) ಅಡಿಯಲ್ಲಿ ದೆಹಲಿ ಪೋಲಿಸ್‌ನ ವಿಶೇಷ ಸೆಲ್ ಬಂಧಿಸಿತ್ತು . ಎಂಸಿಒಸಿಎ ಪ್ರಸ್ತಾವನೆಯು 19 ಸುಲಿಗೆಗಳು, ದರೋಡೆಗಳು, ಕಾರುಗಳ್ಳತನ ಮತ್ತು ದರೋಡೆಗಳ ಜೊತೆಗೆ ಕೊಲೆ ಮತ್ತು ಕೊಲೆ ಯತ್ನದ 19 ಪ್ರಕರಣಗಳನ್ನು ವಿವರಿಸುತ್ತದೆ. 30 ರ ಹರೆಯದ ಗೋಗಿ 2010 ರಲ್ಲಿ ತನ್ನ ತಂದೆಯ ಮರಣದ ನಂತರ ಶಾಲೆ ಬಿಟ್ಟು ಆಸ್ತಿ ವ್ಯವಹಾರದಲ್ಲಿ ತೊಡಗಿಸಿಕೊಂಡು ಅಪರಾಧ ಕೃತ್ಯಗಳನ್ನು ಮಾಡುತ್ತಿದ್ದ ಎಂದು ಈ ಹಿಂದೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಗೋಗಿ ಸೆಪ್ಟೆಂಬರ್ 2010 ರಲ್ಲಿ ಪ್ರವೀಣ್ ಎಂಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದ. ನಂತರ ದೆಹಲಿ ವಿಶ್ವವಿದ್ಯಾನಿಲಯದ ಶ್ರದ್ಧಾನಂದ ಕಾಲೇಜಿನಲ್ಲಿ ನಡೆದ ಚುನಾವಣೆಗಳಲ್ಲಿ ಗೋಗಿ ಮತ್ತು ಆತನ ಸ್ನೇಹಿತರು ಸಂದೀಪ್ ಮತ್ತು ರವೀಂದರ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿ ಗುಂಡು ಹಾರಿಸಿದರು. ಈ ಪ್ರಕರಣದಲ್ಲಿ ಗೋಗಿಯನ್ನು ಅಕ್ಟೋಬರ್ 2011 ರಲ್ಲಿ ಬಂಧಿಸಲಾಯಿತು. ಅದರ ನಂತರ, ಅವರು ಹಣ ಗಳಿಸಲು ಒಂದು ಗ್ಯಾಂಗ್ ಅನ್ನು ರಚಿಸಿದರು ಎಂದು 2018ರ ಎಫ್ಐಆರ್ ಹೇಳಿದೆ.

ಜಿತೇಂದರ್ ಮಾನ್ ಅಲಿಯಾಸ್ ಗೋಗಿಯನ್ನು ಶುಕ್ರವಾರ ಮಧ್ಯಾಹ್ನ ರೋಹಿಣಿ ನ್ಯಾಯಾಲಯದೊಳಗೆ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಸುನೀಲ್ ಅಲಿಯಾಸ್ ಟಿಲ್ಲು ತಾಜಪುರಿಯಾ ನೇತೃತ್ವದ ಎದುರಾಳಿ ತಂಡದ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡು ಹಾರಿಸಿದರು. ಗೋಗಿ ಜೊತೆಗಿದ್ದ ವಿಶೇಷ ಸೆಲ್ ಕೌಂಟರ್ ಇಂಟೆಲಿಜೆನ್ಸ್ ತಂಡದ ಸದಸ್ಯರು ದುಷ್ಕರ್ಮಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ವಕೀಲರ ವೇಷದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು  ಹಾರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪೊಲೀಸರ ಪ್ರಕಾರ ಗೋಗಿ ಮತ್ತು ಆತನ ಪ್ರತಿಸ್ಪರ್ಧಿ ಸುನಿಲ್ ಅಲಿಯಾಸ್ ಟಿಲ್ಲು ವರ್ಷಗಳಿಂದ ಅಲಿಪುರ ಮತ್ತು ಸೋನಿಪತ್‌ನಲ್ಲಿ ಸುಲಿಗೆ ದಂಧೆಗಳನ್ನು ನಡೆಸುತ್ತಿದ್ದಾನೆ ಮತ್ತು ಎರಡು ಗುಂಪುಗಳ ನಡುವಿನ ನಿರಂತರ ಜಗಳ ಕೊಲೆಯಲ್ಲಿ ಕೊನೆಗೊಳ್ಳುತ್ತದೆ. ಕಳೆದ ಆರು ವರ್ಷಗಳಲ್ಲಿ ಎರಡು ಗ್ಯಾಂಗ್‌ಗಳ 10 ಕ್ಕೂ ಹೆಚ್ಚು ಸದಸ್ಯರು ಹತ್ಯೆಗೀಡಾಗಿದ್ದಾರೆ. ಏತನ್ಮಧ್ಯೆ ಅನೇಕರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:  ಕುಳಿತುಕೊಳ್ಳುವ ಹಕ್ಕುಗಳಿಗಾಗಿ ದನಿಯೆತ್ತಿದ ಕೇರಳ, ತಮಿಳುನಾಡಿನ ಕಾರ್ಮಿಕರು; ಏನಿದು ಕುಳಿತುಕೊಳ್ಳುವ ಹಕ್ಕು?

(Firing at Delhi’s Rohini court Jailed gangster Jitender Gogi Killed by Rival 3 others killed and a few injured)

Published On - 2:08 pm, Fri, 24 September 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ