Assam-Meghalaya: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ, 6 ಮಂದಿ ಸಾವು, 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಕಡಿತ

ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಮುಕ್ರೋಹ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿದಂತೆ ಆರು ಜನರು ಸಾವನ್ನಪ್ಪಿದ ನಂತರ ಮೇಘಾಲಯವು ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.

Assam-Meghalaya: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ, 6 ಮಂದಿ ಸಾವು, 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಕಡಿತ
Firing on Assam-Meghalaya border
TV9kannada Web Team

| Edited By: ಅಕ್ಷಯ್​ ಕುಮಾರ್​​

Nov 22, 2022 | 4:21 PM

ಶಿಲ್ಲಾಂಗ್ : ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಮುಕ್ರೋಹ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿದಂತೆ ಆರು ಜನರು ಸಾವನ್ನಪ್ಪಿದ ನಂತರ ಮೇಘಾಲಯವು ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಇಂದು ಬೆಳಗ್ಗೆ 10:30 ರಿಂದ ಮೇಘಾಲಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್/ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೇಘಾಲಯ ಸರ್ಕಾರದ ಗೃಹ (ಪೊಲೀಸ್) ಇಲಾಖೆ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಘಟನೆಯಲ್ಲಿ ಮೇಘಾಲಯದ ಐವರು ಮತ್ತು ಒಬ್ಬ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಇಂದು ಖಚಿತಪಡಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೇಘಾಲಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಮೇಘಾಲಯ ಸರ್ಕಾರವು ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ಪೊಲೀಸ್ ಪ್ರಧಾನ ಕಚೇರಿ, ಮೇಘಾಲಯ, ಶಿಲ್ಲಾಂಗ್‌ನಿಂದ ವರದಿಗಳು ಬಂದಿವೆ, ಮುಕ್ರೋಹ್, ಪಶ್ಚಿಮ ಜೈನ್ತಿಯಾ ಹಿಲ್ಸ್, ಜೊವಾಯ್‌ನಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗವುಂಟು ಮಾಡುವ ಸಾಧ್ಯತೆಯಿದೆ ಎಂದು ಅಗತ್ಯ ಕ್ರಮ ಕೈಗೊಳ್ಳುಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಅಹಿತರ ಘಟನೆಯಿಂದ ಪಶ್ಚಿಮ ಜೈನ್ತಿಯಾ ಹಿಲ್ಸ್, ಈಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಖಾಸಿ ಹಿಲ್ಸ್, ರಿ-ಭೋಯ್, ಈಸ್ಟರ್ನ್ ವೆಸ್ಟ್ ಖಾಸಿ ಹಿಲ್ಸ್, ವೆಸ್ಟ್ ಖಾಸಿ ಹಿಲ್ಸ್ ಮತ್ತು ನೈಋತ್ಯ ಖಾಸಿ ಹಿಲ್ಸ್‌ಗಳಲ್ಲಿ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ, ಇದು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಬಹುದು ಎಂದು ತಿಳಿಸಿದೆ.

ಇದನ್ನು ಓದಿ : ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಹಿಂಪಡೆದ ಅಸ್ಸಾಂ ಸರ್ಕಾರ

ಮೇಘಾಲಯ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮಾಧ್ಯಮಗಳ (WhatsApp ಮತ್ತು Facebook Twitter, YouTube ಇತ್ಯಾದಿ ಸಾಮಾಜಿಕ ಮಾಧ್ಯಮ) ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ, CVD Diengdoh, ಗೃಹ (ಪೊಲೀಸ್) ಇಲಾಖೆಯ ಕಾರ್ಯದರ್ಶಿ, ಮೇಘಾಲಯದಲ್ಲಿ ಮೊಬೈಲ್ ಇಂಟರ್ನೆಟ್/ಡೇಟಾ ಸೇವೆಗಳನ್ನು ಸ್ಥಗಿತಗೊಳಿಸುವ ಅಧಿಸೂಚನೆಯನ್ನು ಪ್ರಕಟಿಸಿದೆ.

ಟೆಲಿಕಾಂ ಮತ್ತು ಸಾಮಾಜಿಕ ಮಾಧ್ಯಮ ಸೇವೆಗಳನ್ನು ಮೇಘಾಲಯದ ಜಿಲ್ಲೆಗಳಾದ ವೆಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಖಾಸಿ ಹಿಲ್ಸ್, ರಿ-ಭೋಯ್, ಈಸ್ಟರ್ನ್ ವೆಸ್ಟ್ ಖಾಸಿ ಹಿಲ್ಸ್, ವೆಸ್ಟ್ ಖಾಸಿ ಹಿಲ್ಸ್ ಮತ್ತು ನೈಋತ್ಯ ಖಾಸಿ ಹಿಲ್ಸ್ ಜಿಲ್ಲೆಗಳಲ್ಲಿ ಕಡಿತಗೊಳಿಸಲಾಗಿದೆ. ಪ್ರಕಟಣೆಯನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 188 ರ ಅಡಿಯಲ್ಲಿ ಮತ್ತು ಭಾರತೀಯ ಟೆಲಿಗ್ರಾಫ್ ಆಕ್ಟ್, 1885 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ದಂಡ ವಿಧಿಸಲಾಗುವುದು ಎಂದು ಅಧಿಸೂಚನೆಯು ಪುನರಾವರ್ತನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada