ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !

ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:May 22, 2021 | 11:34 PM

ಅಹ್ಮದಾಬಾದ್​: ದೇಶಾದ್ಯಂತ ಬ್ಲ್ಯಾಕ್ ಫಂಗಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಗುಜರಾತ್​​ನಲ್ಲಿ 15ವರ್ಷದ ಬಾಲಕನೊಬ್ಬನಲ್ಲಿ ಈ ಕಪ್ಪು ಶಿಲೀಂದ್ರ ಕಾಣಿಸಿಕೊಂಡಿದೆ. ನನಗೆ ಗೊತ್ತಿರುವ ಮಟ್ಟಿಗೆ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್​ ಕಾಣಿಸಿಕೊಂಡ ಮೊದಲ ಪ್ರಕರಣ ಇದು ಎಂದು ಅಹ್ಮದಾಬಾದ್​ನ ಮಕ್ಕಳ ವೈದ್ಯ ಡಾ. ಅಭಿಷೇಕ್ ಬನ್ಸಾಲ್​ ತಿಳಿಸಿದ್ದಾರೆ.

ಈ ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಅದಾದ ಬಳಿಕ ಏಪ್ರಿಲ್​ 24ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದ. ಆಸ್ಪತ್ರೆಯಿಂದ ಬಂದು ಹಲವು ದಿನಗಳವರೆಗೆ ಆರೋಗ್ಯವಾಗಿಯೇ ಇದ್ದ ಹುಡುಗನಲ್ಲಿ ಮತ್ತೆ ಹಲ್ಲುನೋವು, ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡಿತು. ಮತ್ತೆ ಆಸ್ಪತ್ರೆಗೆ ದಾಖಲಾದ ಆತನನ್ನು ಪರೀಕ್ಷಿಸಿದಾಗ ಮ್ಯೂಕೋರ್ಮೈಕೋಸಿಸ್​ ಇರುವುದು ದೃಢಪಟ್ಟಿತು ಎಂದು ಡಾ. ಬನ್ಸಾಲ್​ ಮಾಹಿತಿ ನೀಡಿದ್ದಾರೆ.

ಈ ಬಾಲಕನ ಬಾಯಿಯ ಬಲಭಾಗದ ಅರ್ಧದಷ್ಟು ಪೆಲೇಟ್​​ ಮತ್ತು ಮೇಲಿನ ಹಲ್ಲನ್ನು ತೆಗೆದುಹಾಕಲಾಗಿದೆ. ಸೈನಸ್​​ನ್ನು ಸ್ವಚ್ಛಗೊಳಿಸಲಾಗಿದೆ. ಸದ್ಯ ಆತನ ಸ್ಥಿತಿ ಸ್ಥಿರವಾಗಿದೆ. ಇನ್ನು ಮೂರು-ನಾಲ್ಕು ದಿನಗಳಲ್ಲಿ ಡಿಸ್​ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಣ್ಣೀರಿನ ಬಗ್ಗೆ ನ್ಯೂಯಾರ್ಕ್ ಟೈಮ್ಸ್​ನಲ್ಲಿ ಪ್ರಕಟವಾಗಿದೆ ಎನ್ನಲಾದ ಈ ಸುದ್ದಿಯ ಅಸಲಿ ವಿಷಯವೇನು?

Published On - 11:32 pm, Sat, 22 May 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ