ಗೋವಾದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

|

Updated on: Jun 22, 2020 | 12:21 PM

ಗೋವಾ: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್​ಗೆ ಗೋವಾದಲ್ಲಿ ಮೊದಲ ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 85 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ವೃದ್ಧೆ ಉತ್ತರ ಗೋವಾದ ಮೊರ್ಲೆಮ್ ಗ್ರಾಮದ ನಿವಾಸಿಯಾಗಿದ್ದು, ಕೊರೊನಾ ಸೋಂಕಿತರಿಗೆ ನಿಗದಿಪಡಿಸಿದ್ದ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮೊರ್ಲೆಮ್ ಗ್ರಾಮದ 85 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಮೊದಲ ಕೊರೊನಾ ಸಾವಾಗಿದೆ.

ಗೋವಾದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ
Follow us on

ಗೋವಾ: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್​ಗೆ ಗೋವಾದಲ್ಲಿ ಮೊದಲ ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 85 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

ವೃದ್ಧೆ ಉತ್ತರ ಗೋವಾದ ಮೊರ್ಲೆಮ್ ಗ್ರಾಮದ ನಿವಾಸಿಯಾಗಿದ್ದು, ಕೊರೊನಾ ಸೋಂಕಿತರಿಗೆ ನಿಗದಿಪಡಿಸಿದ್ದ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮೊರ್ಲೆಮ್ ಗ್ರಾಮದ 85 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಮೊದಲ ಕೊರೊನಾ ಸಾವಾಗಿದೆ.