Lok Sabha Session 2024: ಜೂನ್​ 24ರಿಂದ ಜುಲೈ 3ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಮಂದಿ ಸಂಸದರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 18 ಲೋಕಸಭೆಯ ಮೊದಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

Lok Sabha Session 2024: ಜೂನ್​ 24ರಿಂದ ಜುಲೈ 3ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ
ಲೋಕಸಭಾ ಅಧಿವೇಶನ
Follow us
ನಯನಾ ರಾಜೀವ್
|

Updated on:Jun 12, 2024 | 10:41 AM

18ನೇ ಲೋಕಸಭೆಯ ಮೊದಲ ಅಧಿವೇಶನ(Session) ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಮಂದಿ ಸಂಸದರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 18 ಲೋಕಸಭೆಯ ಮೊದಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ಅಧಿವೇಶನವು ಜೂನ್​ 24ರಿಂದ ಜುಲೈ 3ರವರೆಗೆ ನಡೆಯಲಿದ್ದು, ಎಲ್ಲಾ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಪ್ರಧಾನಿ ಮೋದಿ ಬಹುಮತ ಸಾಬೀತು ಮಾಡಲಿದ್ದಾರೆ.

ಮೊದಲ ಮೂರು ದಿನ ಸಂಸದರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ, ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆ ಇದೆ.

ರಾಜ್ಯಸಭೆಯ 264 ನೇ ಅಧಿವೇಶನವು ಜೂನ್ 27 ರಂದು ಪ್ರಾರಂಭವಾಗಿ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ. ಜೂನ್ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ತಮ್ಮ ಮಂತ್ರಿಮಂಡಲವನ್ನು ಪರಿಚಯಿಸುವ ನಿರೀಕ್ಷೆಯಿದೆ.

ಮತ್ತಷ್ಟು ಓದಿ: ಬಿಜೆಪಿ ಮಾಸ್ಟರ್​​ ಪ್ಲಾನ್: ಆಂಧ್ರದ ಪುರಂದೇಶ್ವರಿಗೆ ಲೋಕಸಭೆ ಸ್ಪೀಕರ್‌ ಹುದ್ದೆ? ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ

ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಭಾಪತಿಯನ್ನು ಆಯ್ಕೆ ಮಾಡಲಾಗುತ್ತದೆ. ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ 293 ಸ್ಥಾನಗಳನ್ನು ಗಳಿಸಿದೆ, ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಏತನ್ಮಧ್ಯೆ, ಇಂಡಿಯಾ ಬ್ಲಾಕ್ ಲೋಕಸಭೆಯಲ್ಲಿ 233 ಸ್ಥಾನಗಳನ್ನು ಹೊಂದಿದೆ, ಅದರಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಪಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:34 am, Wed, 12 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ