ಅಫ್ಘಾನಿಸ್ತಾನದಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದೇ ಮೊದಲ ಆದ್ಯತೆ: ವಿದೇಶಾಂಗ ಸಚಿವಾಲಯದ ವಕ್ತಾರ

Afghanistan: ಅಫ್ಘಾನಿಸ್ತಾನವನ್ನು ಯಾರು ಆಳುತ್ತಾರೆ ಎಂಬುದನ್ನು ಸ್ಪಷ್ಟಪಡಿಸದ ಹೊರತು ಮನ್ನಣೆಯ ಪ್ರಶ್ನೆಯು ಉದ್ಭವಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಅಫ್ಘಾನಿಸ್ತಾನದಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದೇ ಮೊದಲ ಆದ್ಯತೆ: ವಿದೇಶಾಂಗ ಸಚಿವಾಲಯದ ವಕ್ತಾರ
ಅರಿಂದಮ್ ಬಾಗ್ಚಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 27, 2021 | 6:25 PM

ದೆಹಲಿ: ಅಫ್ಘಾನಿಸ್ತಾನದಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು ಈ ಕ್ಷಣದಲ್ಲಿ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಪುನರುಚ್ಚರಿಸಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವನ್ನು ಗುರುತಿಸಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ನಂತರ ಬರುತ್ತದೆ. ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಅನಿಶ್ಚಿತವಾಗಿದೆ ಜನರ ರಕ್ಷಣೆ ಮತ್ತು ಸುರಕ್ಷತೆಯೇ ಪ್ರಾಥಮಿಕ ಕಾಳಜಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ಗುರುವಾರ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಭಾರತದ ಪ್ರಸ್ತುತ ನಿಲುವು ಕಾದು ನೋಡುವುದು ಎಂದು ಅವರು ಒತ್ತಿ ಹೇಳಿದರು. ಅದೇ ಸಮಯದಲ್ಲಿ, ಅಫ್ಘಾನ್ ವಿಚಾರದಲ್ಲಿ ಭಾರತವು ಪ್ರಮುಖ ಪಾಲುದಾರರು ಮತ್ತು ಇತರ ದೇಶಗಳೊಂದಿಗೆ ತೊಡಗಿಸಿಕೊಂಡಿದೆ. ಅಫ್ಘಾನಿಸ್ತಾನದಲ್ಲಿಕೇವಲ ತಾಲಿಬಾನ್ ಸರ್ಕಾರವೇ ಅಥವಾ ಇತರ ಅಫ್ಘಾನ್ ನಾಯಕರೊಂದಿಗೆ ಅಧಿಕಾರ ಹಂಚಿಕೆ ವ್ಯವಸ್ಥೆಯ ಭಾಗವಾಗಿದೆಯೇ ಎಂದು ಮೊದಲು ನೋಡಬೇಕಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಆಗಸ್ಟ್ 15 ರಂದು ತಾಲಿಬಾನ್ ಪಂಜಶೀರ್ ಪ್ರಾಂತ್ಯವನ್ನು ಹೊರತುಪಡಿಸಿ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿತು. ಕಾಬೂಲ್ ಕೂಡಾ ತಾಲಿಬಾನ್ ಕೈವಶದಲ್ಲಿದೆ. ಅಂದಿನಿಂದ ಅಫ್ಘಾನಿಸ್ತಾನದ ಮುಂದಿನ ಸರ್ಕಾರದ ಬಗ್ಗೆ ಹಲವಾರು ಸುತ್ತಿನ ಸಮಾಲೋಚನೆಗಳು ನಡೆಯುತ್ತಿವೆ. ಆರಂಭದಲ್ಲಿ ಮಧ್ಯಂತರ ಸ್ಥಾಪನೆಯನ್ನು ಪ್ರಸ್ತಾಪಿಸಲಾಗಿತ್ತಾದರೂ ತಾಲಿಬಾನ್‌ಗಳು ತಮ್ಮ ಸರ್ಕಾರ ಎಂದು ಹೇಳಿದ್ದು ಕೆಲವು ಮಂತ್ರಿಗಳ ಹೆಸರುಗಳನ್ನು ಈಗಾಗಲೇ ಘೋಷಿಸಲಾಗಿದೆ. ಆದರೆ ತಾಲಿಬಾನ್‌ನೊಂದಿಗೆ ಶಾಂತಿ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ತಾಲಿಬಾನ್ ವಿರೋಧಿ ಪಡೆ ಎಲ್ಲರನ್ನು ಒಳಗೊಂಡ ಸರ್ಕಾರಕ್ಕಾಗಿ ಪ್ರಯತ್ನಿಸುತ್ತಿದೆ.

ಅಫ್ಘಾನಿಸ್ತಾನವನ್ನು ಯಾರು ಆಳುತ್ತಾರೆ ಎಂಬುದನ್ನು ಸ್ಪಷ್ಟಪಡಿಸದ ಹೊರತು ಮನ್ನಣೆಯ ಪ್ರಶ್ನೆಯು ಉದ್ಭವಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತವು ಅಮೆರಿಕ, ಬ್ರಿಟನ್, ಫ್ರಾನ್ಸ್, ರಷ್ಯಾ, ಚೀನಾ, ಜರ್ಮನಿ, ಕತಾರ್, ಇರಾನ್, ಉಜ್ಬೇಕಿಸ್ತಾನ್, ತಜಕಿಸ್ತಾನ್ ಮತ್ತು ಕಜಕಿಸ್ತಾನ್ ಮತ್ತು ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಕುರಿತು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಚೀನಾ, ಕೆನಡಾ, ತಜಕಿಸ್ತಾನದಂತಹ ದೇಶಗಳು ಈಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅನ್ನು ಗುರುತಿಸುವ ಅಥವಾ ಗುರುತಿಸದಿರುವ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿವೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹಿಂದಿನ ಆಡಳಿತದಲ್ಲಿ ಭಾರತವು ತಾಲಿಬಾನ್ ಸರ್ಕಾರವನ್ನು ಗುರುತಿಸಲು ನಿರಾಕರಿಸಿದ್ದರಿಂದ ಮತ್ತು ಅಹ್ಮದ್ ಶಾ ಮಸೂದ್ ನೇತೃತ್ವದ ತಾಲಿಬಾನ್ ವಿರೋಧಿ ಉತ್ತರ ಒಕ್ಕೂಟವನ್ನು ಬೆಂಬಲಿಸಿದ್ದರಿಂದ ಅವರು ಭಾರತದೊಂದಿಗೆ ವಿರೋಧವನ್ನು ಹೊಂದಿದ್ದರು.

ಕಾಬೂಲ್‌ನಿಂದ ಭಾರತವನ್ನು ಸ್ಥಳಾಂತರಿಸುವ ಕಾರ್ಯಕ್ರಮ ಮುಂದುವರೆಯಲಿದೆ. ಹಿಂದಿರುಗಲು ಬಯಸಿದ ಬಹುಪಾಲು ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ಬಾಗ್ಚಿ ಹೇಳಿದರು. ಕೆಲವು ಅಫ್ಘಾನ್ ಪ್ರಜೆಗಳನ್ನೂ ರಕ್ಷಿಸಲಾಗಿದೆ. ಭಾರತದ ಪ್ರಾಥಮಿಕ ಗಮನವು ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವುದಾಗಿದೆ. ಆದರೆ ಭಾರತೀಯರ ಪರವಾಗಿ ನಿಂತಿದ್ದ ಆಫ್ಘನ್ನರ ಪರವಾಗಿ ಭಾರತವೂ ನಿಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:  ಪಾಕಿಸ್ತಾನದ ಹಕ್ಕಾನಿ ಬಾಂಬರ್ ಬಂಧನ; ಕಾಬೂಲ್ ಸ್ಫೋಟದ ನಂತರ ಮುೂರನೇ ಸ್ಫೋಟಕ್ಕೆ ಸಂಚು?

(first priority of the government at this moment is to safely evacuate people from Afghanistan says MEA spokesperson)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ