Lok Sabha Session: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಶುರು

ನೂತನ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Lok Sabha Session: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಶುರು
ಲೋಕಸಭಾ ಅಧಿವೇಶನ
Follow us
ನಯನಾ ರಾಜೀವ್
|

Updated on:Jun 24, 2024 | 9:33 AM

ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿಯೂ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ ಇದೆ.

ಅಧಿವೇಶನದ ಮೊದಲ ದಿನ, ಏಳು ಬಾರಿ ಸಂಸದರಾಗಿದ್ದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ದಾಖಲಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಹಿರಿತನದ ಆಧಾರದಲ್ಲಿ ಸಂಸದ ಕೆ.ಸುರೇಶ್ ಈ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಹೇಳುತ್ತಿದೆ.

ಆದರೆ, ಪ್ರಸಕ್ತ ಲೋಕಸಭೆಯಲ್ಲಿ ಸತತವಾಗಿ ಸತತವಾಗಿ ಸೋಲನುಭವಿಸದೆ ಸಂಸದರಾಗಿ ಸೇವೆ ಸಲ್ಲಿಸಿದ ವಿಚಾರದಲ್ಲಿ ಮಹತಾಬ್ ಹಿರಿಯರು ಎಂಬುದು ಸರ್ಕಾರದ ನಿಲುವು. ಸೋಮವಾರ ಸದನದ ಕಲಾಪ ಪ್ರಾರಂಭವಾಗುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು ಅವರು ಮಹತಾಬ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಬೋಧಿಸಲಿದ್ದಾರೆ.

ಮತ್ತಷ್ಟು ಓದಿ: Lok Sabha Session: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್​ 24ರಿಂದ ಪ್ರಾರಂಭ

ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಹೊಸದಾಗಿ ಆಯ್ಕೆಯಾದ ಸಂಸದರ ಪಟ್ಟಿಯನ್ನು ಮೊದಲು ಮಂಡಿಸಲಿದ್ದಾರೆ. ಏಪ್ರಿಲ್‌ನಿಂದ ಜೂನ್‌ವರೆಗೆ ನಡೆದ ಸಾರ್ವತ್ರಿಕ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಲೋಕಸಭೆ ಅಧಿವೇಶನ ಇದಾಗಿದೆ.

18 ನೇ ಲೋಕಸಭೆಯಲ್ಲಿ, NDA 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಆದರೆ ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಇಂಡಿಯಾ ಬ್ಲಾಕ್ 234 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 99 ಸ್ಥಾನಗಳನ್ನು ಹೊಂದಿದೆ.

ಸೋಮವಾರದ ಮೊದಲ ದಿನದ ಅಧಿವೇಶನದಲ್ಲಿಮೋದಿ ಮತ್ತವರ ಸಂಪುಟ ಸದಸ್ಯರು ಸೇರಿದಂತೆ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ 264 ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ವರದಿಗಳ ಪ್ರಕಾರ, ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ತಮ್ಮ ಸಂಸದರಿಗೆ ಸೂಚನೆ ನಿಡಿದ್ದಾರೆ, ಹಾಗೆಯೇ ರಾಜಧಾನಿ ಅಮರಾವತಿ ಮತ್ತು ಪೋಲವರಂ ಯೋಜನೆಗೆ ಹಣದ ಬೇಡಿಕೆಯೂ ಸೇರಿದೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:01 am, Mon, 24 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ