AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Session: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್​ 24ರಿಂದ ಪ್ರಾರಂಭ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದ್ದು, ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ನಡೆಯಲಿದೆ.

Lok Sabha Session: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್​ 24ರಿಂದ ಪ್ರಾರಂಭ
ಸಂಸತ್ ಅಧಿವೇಶನ
ನಯನಾ ರಾಜೀವ್
|

Updated on: Jun 23, 2024 | 12:46 PM

Share

ನೂತನ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ( ಜೂನ್​ 24) ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿದಂತೆ ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆ ನಡೆಯಲಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಪ್ರಿಲ್-ಜೂನ್‌ನಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದ ನಂತರ ಇದು ಮೊದಲ ಲೋಕಸಭೆ ಅಧಿವೇಶನವಾಗಿದೆ.

ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿದೆ. 18ನೇ ಲೋಕಸಭೆಯಲ್ಲಿ, ಎನ್‌ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಬಿಜೆಪಿಯು 240 ಸ್ಥಾನಗಳನ್ನು ಹೊಂದಿದೆ, ಬಹುಮತದ ಮಾರ್ಕ್ 272 ಕ್ಕಿಂತ ಕಡಿಮೆಯಿದೆ. ಪ್ರತಿಪಕ್ಷ ಇಂಡಿ ಬಣವು 234 ಸ್ಥಾನಗಳನ್ನು ಹೊಂದಿದೆ, ಕಾಂಗ್ರೆಸ್ 99 ಸ್ಥಾನಗಳನ್ನು ಹೊಂದಿದೆ.

ಮತ್ತಷ್ಟು ಓದಿ: Lok Sabha Session 2024: ಜೂನ್​ 24ರಿಂದ ಜುಲೈ 3ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ

ಬೆಳಗ್ಗೆ 11 ಗಂಟೆಯಿಂದ ಪ್ರಧಾನಿ ಮೋದಿ ಮತ್ತು ಅವರ ಮಂತ್ರಿಮಂಡಲ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇತರರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ಮೋದಿ ಮತ್ತು ಅವರ ಮಂತ್ರಿ ಮಂಡಳಿ ಸೇರಿದಂತೆ ಹೊಸದಾಗಿ ಚುನಾಯಿತರಾದ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮರುದಿನ (ಜೂನ್ 25) 264 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಂಬಂಧಿಸಿದಂತೆ ಪ್ರಧಾನಿ ಉತ್ತರ ನೀಡಲಿದ್ದಾರೆ.

ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳಲ್ಲಿ ಅಕ್ರಮಗಳಲ್ಲದೆ, ಅಗ್ನಿಪಥದಂತಹ ಯೋಜನೆಗಳಿಗೂ ಸರ್ಕಾರ ವಿರೋಧವನ್ನು ಎದುರಿಸಬೇಕಾಗುತ್ತದೆ.ಪ್ರತಿಪಕ್ಷಗಳು ಸರ್ಕಾರದ ವಿರುದ್ಧದ ಬತ್ತಳಿಕೆಯನ್ನು ತುಂಬಿಕೊಳ್ಳುವಲ್ಲಿ ನಿರತರಾಗಿದ್ದರೆ, ಬಿಜೆಪಿ ಮತ್ತು ಎನ್‌ಡಿಎ ನಾಯಕತ್ವ ಪ್ರತಿ ದಾಳಿಯನ್ನು ಎದುರಿಸಲು ತಂತ್ರ ರೂಪಿಸುತ್ತಿದೆ.

ನೀಟ್​ ಪ್ರಶ್ನೆ ಪತ್ರಿಕೆ ಪೇಪರ್ ಸೋರಿಕೆ ಎಕ್ಸಿಟ್ ಪೋಲ್‌ಗಳಿಂದ ಷೇರು ಮಾರುಕಟ್ಟೆಯ ಏರಿಳಿತದಿಂದ ನಷ್ಟ ಪಶ್ಚಿಮ ಬಂಗಾಳ ರೈಲ್ವೆ ಅಪಘಾತ ಮತ್ತು ರೈಲ್ವೆ ಸುರಕ್ಷತೆ ಹಣದುಬ್ಬರ, ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ