ಲಾಕ್ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಹೈದರಾಬಾದ್: ಕೊರೊನಾ ವೈರಸ್ ಲಾಕ್ಡೌನ್ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]
ಹೈದರಾಬಾದ್: ಕೊರೊನಾ ವೈರಸ್ ಲಾಕ್ಡೌನ್ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.
ಲಾಕ್ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್ಗೆ ರೈಲು ತೆರಳಿದೆ. 24 ಕೋಚ್ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.
ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.
Published On - 12:13 pm, Fri, 1 May 20