ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ಪ್ಯಾಸೆಂಜರ್ ಇಳಿಸಲು ನಿಲ್ಲಿಸಿದ್ದ ಬಸ್ಸಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ.

ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ
ಅಪಘಾತದಲ್ಲಿ ನಜ್ಜುಗುಜ್ಜಾದ ಓಮ್ನಿ ಕಾರು
Follow us
ಪೃಥ್ವಿಶಂಕರ
|

Updated on:Feb 01, 2021 | 12:51 PM

ಬೆಂಗಳೂರು: ತಮಿಳುನಾಡಿನ ಈರೋಡ್​ ಜಿಲ್ಲೆಯ ಕಾವೇರಿಪಟ್ಟಣಂ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ಸಿಗೆ, ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.. ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳಾಗಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ವ್ಯಕ್ತಿ ಎದುರಾದಾಗ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ, ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಬಸ್ಸ್​ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓಮ್ನಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

Published On - 12:28 pm, Mon, 1 February 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ