ಬೆಂಗಳೂರು: ತಮಿಳುನಾಡಿನ ಈರೋಡ್ ಜಿಲ್ಲೆಯ ಕಾವೇರಿಪಟ್ಟಣಂ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ಲಾಗೆ ಹೊರಟಿದ್ದರು. ಈ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ಸಿಗೆ, ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ..
ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳಾಗಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.
ರಸ್ತೆ ದಾಟುತ್ತಿದ್ದ ವ್ಯಕ್ತಿ ಎದುರಾದಾಗ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ, ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಬಸ್ಸ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓಮ್ನಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 12:28 pm, Mon, 1 February 21