ಗುಜರಾತ್​: ಹಾಸ್ಟೆಲ್​ನಲ್ಲಿ ನಮಾಜ್​ ಮಾಡುತ್ತಿರುವ ವೇಳೆ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

|

Updated on: Mar 17, 2024 | 12:45 PM

ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಸ್ಟೆಲ್ ಕೋಣೆಗೂ ಹಾನಿ ಮಾಡಿ, ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ದಾಳಿಯಲ್ಲಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಹಮದಾಬಾದ್‌ನ ಎಸ್‌ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಾತ್​: ಹಾಸ್ಟೆಲ್​ನಲ್ಲಿ ನಮಾಜ್​ ಮಾಡುತ್ತಿರುವ ವೇಳೆ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ವಿದ್ಯಾರ್ಥಿ
Image Credit source: India TV
Follow us on

ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾಗ ಘಟನೆ ನಡೆದಿದೆ.  ಹಾಸ್ಟೆಲ್ ಕೋಣೆಗೂ ಹಾನಿ ಮಾಡಿ, ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ದಾಳಿಯಲ್ಲಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಹಮದಾಬಾದ್‌ನ ಎಸ್‌ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿಶ್ವವಿದ್ಯಾನಿಲಯದ ಎಲ್ಲಾ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿದೆ. ಕಾನೂನು ಜಾರಿ ಅಧಿಕಾರಿಗಳು ಘಟನೆಯ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಹೊರಬಿದ್ದಿದ್ದು, ಘೋಷಣೆಗಳನ್ನು ಕೂಗುತ್ತಾ ವ್ಯಕ್ತಿಗಳು ಹಾಸ್ಟೆಲ್ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ಚಿತ್ರಿಸಲಾಗಿದೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ದಾಳಿಯನ್ನು ಖಂಡಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಈ ಘಟನೆ ನಡೆದಿರುವುದರಿಂದ ಮಧ್ಯಸ್ಥಿಕೆ ವಹಿಸುತ್ತಾರೆಯೇ ಎಂಬ ಪ್ರಶ್ನೆಗಳನ್ನು ಎತ್ತಿದರು.

ಪೊಲೀಸರು ತಮ್ಮ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ – ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಿದರು. ಉಜ್ಬೇಕಿಸ್ತಾನ್, ಅಫ್ಘಾನಿಸ್ತಾನ ಮತ್ತು ಆಫ್ರಿಕನ್ ರಾಷ್ಟ್ರಗಳ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಶೀಘ್ರವಾಗಿ ಆರೋಪಿಗಳನ್ನು ಬಂಧಿಸುವಂತೆ ಉನ್ನತ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿರುವ ರಾಜ್ಯ ಗೃಹ ಸಚಿವ ಹರ್ಷ್​ ಸಾಂಘ್ವಿ, ನ್ಯಾಯಯುತ ತನಿಖೆಯನ್ನು ಖಾತರಿಪಡಿಸುವಂತೆಯೂ ನಿರ್ದೇಶನ ನೀಡಿದ್ದಾರೆ.

ಈ ಘಟನೆಯಲ್ಲಿ ಐವರು ವಿದ್ಯಾರ್ಥಿಗಳ ಗಾಯಗೊಂಡಿದ್ದು, ಈ ಪೈಕಿ ಅಫ್ಘಾನಿಸ್ತಾನದ ಓರ್ವ ವಿದ್ಯಾರ್ಥಿ, ಶ್ರೀಲಂಕಾ ಹಾಗೂ ತರ್ಕ್​ ಮೆನಿಸ್ತಾನ್​ನ ತಲಾ ಓರ್ವ ವಿದ್ಯಾರ್ಥಿ ಹಾಗೂ ಆಫ್ರಿಕಾದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ