AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಡ್ ಜಿಹಾದ್​ಗೆ ಬಗ್ಗದ ಕಾಸರಗೋಡಿನ ದಂತ ವೈದ್ಯನನ್ನು ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್, ಮುಸ್ಲಿಂ ಲೀಗ್ ಮುಖಂಡ ಸೇರಿ ಐವರು ವಶಕ್ಕೆ

ಯುವತಿ ಮುಂದಿಟ್ಟು ಲಕ್ಷ ಲಕ್ಷ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಲ್ಯಾಂಡ್ ಜಿಹಾದ್ ಗೆ ಬಗ್ಗದ ದಂತ ವೈದ್ಯನಿಗೆ ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಮುಸ್ಲಿಂ ಲೀಗ್ ಮುಖಂಡ ಸೇರಿ ಐವರನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲ್ಯಾಂಡ್ ಜಿಹಾದ್​ಗೆ ಬಗ್ಗದ ಕಾಸರಗೋಡಿನ ದಂತ ವೈದ್ಯನನ್ನು ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್, ಮುಸ್ಲಿಂ ಲೀಗ್ ಮುಖಂಡ ಸೇರಿ ಐವರು ವಶಕ್ಕೆ
ಬದಿಯಡ್ಕ ಪೊಲೀಸ್ ಠಾಣೆ
TV9 Web
| Edited By: ಆಯೇಷಾ ಬಾನು|

Updated on: Nov 12, 2022 | 9:55 AM

Share

ಕಾಸರಗೋಡು: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದೆ. ಹೀಗಾಗಿ ಮುಸ್ಲಿಂ ಲ್ಯಾಂಡ್ ಜಿಹಾದ್​ಗೆ ಗಡಿನಾಡ ದಂತ ವೈದ್ಯ ಬಲಿಯಾದ್ರಾ ಎಂಬ ಪ್ರಶ್ನೆ ಎಂದ್ದಿದೆ. ಪ್ರಖ್ಯಾತ ದಂತ ವೈದ್ಯನ ಸಾವಿನ ಬಗ್ಗೆ ವಿಹೆಚ್​ಪಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕೇಸ್​ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ‌ಗಡಿ ಭಾಗದ ಕೇರಳದ ಕಾಸರಗೋಡು ‌ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿ ಅವರು ನವೆಂಬರ್ 8 ರಂದು ನಾಪತ್ತೆಯಾಗಿದ್ದರು. ಬಳಿಕ ನ.10ರಂದು ಉಡುಪಿ ಜಿಲ್ಲೆ ಕುಂದಾಪುರದ ಹಟ್ಟಿಯಂಗಡಿ ಬಳಿಯ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ರು. ಕಳೆದ ಆರು ತಿಂಗಳಿನಿಂದ ಜಾಗದ ವಿಚಾರದಲ್ಲಿ ಡಾ.ಕೃಷ್ಣಮೂರ್ತಿ ಅವರು ಲ್ಯಾಂಡ್ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದರು. ಜಾಗ ಖರೀದಿ ವಿಚಾರದಲ್ಲಿ ಡಾ.ಕೃಷ್ಣಮೂರ್ತಿಗೆ ಸ್ಥಳೀಯ ಕೆಲ ಮುಸ್ಲಿಮರು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಡಾ.ಕೃಷ್ಣಮೂರ್ತಿ, ನ.8ರಂದು ಬದಿಯಡ್ಕದ ಕ್ಲಿನಿಕ್ ಗೆ ಬಂದಿದ್ದರು. ಈ ವೇಳೆ ಕ್ಲಿನಿಕ್ ಗೆ ಬಂದಿದ್ದ ಮುಸ್ಲಿಂ ಯುವತಿ ಜೊತೆ ಅನುಚಿತ ವರ್ತನೆ ಮಾಡಿರುವ ಆರೋಪ ಕೇಳಿ ಬಂದಿದ್ದು ತಂಡವೊಂದು ಕೃಷ್ಣಮೂರ್ತಿಗೆ ಬೆದರಿಕೆ ಒಡ್ಡಿ ಹಲ್ಲೆಗೆ ಮುಂದಾಗಿದೆ. ಆ ಘಟನೆ ‌ಬಳಿಕ ಡಾ.ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಸದ್ಯ ಈಗ ಮುಸ್ಲಿಂ ಯುವತಿ ಮೂಲಕ ವೈದ್ಯರನ್ನ ಬ್ಲಾಕ್ ಮೇಲ್ ಮಾಡಿದ್ರಾ? ಬ್ಲ್ಯಾಕ್ ಮೇಲ್ ಗೆ ಬೆದರಿ ಡಾ.ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡರಾ? ಎಂಬ ಮಾತು ಕೇಳಿ ಬಂದಿದೆ. ಯುವತಿ ಮುಂದಿಟ್ಟು ಲಕ್ಷ ಲಕ್ಷ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಲ್ಯಾಂಡ್ ಜಿಹಾದ್ ಗೆ ಬಗ್ಗದ ದಂತ ವೈದ್ಯನಿಗೆ ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಮುಸ್ಲಿಂ ಲೀಗ್ ಮುಖಂಡ ಸೇರಿ ಐವರನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಡಿಕೆ ವ್ಯಾಪಾರಿ ಹಾಗೂ ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್ ಕಾರ್ಯದರ್ಶಿ ಅಲಿ ತುಪ್ಪಕಲ್ಲು, ಮುಸ್ಲಿಂ ಲೀಗ್ ಬದಿಯಡ್ಕ ಪಂಚಾಯತ್ ಪದಾಧಿಕಾರಿ ಮುಹಮ್ಮದ್ ಹನೀಫ ಯಾನೆ ಅನ್ವರ್, ಕುಂಬ್ಡಾಜೆ ನಿವಾಸಿ ಅಶ್ರಫ್, ಅನ್ನಡ್ಕ ನಿವಾಸಿ ಮುಹಮ್ಮದ್ ಶಿಯಾಬುದ್ದೀನ್, ವಿದ್ಯಾಗಿರಿ ನಿವಾಸಿ ಉಮರುಲ್ ಫಾರೂಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್