ಮರಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸ್ಥಳದಲ್ಲೇ ಸಾವು

| Updated By: ಸಾಧು ಶ್ರೀನಾಥ್​

Updated on: Dec 21, 2020 | 3:34 PM

ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮರಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಡೆಂಕಣಕೋಟೆ ಜಿಲ್ಲೆಯ ದಬ್ಬಾಗುಳಿ ಬಳಿ ನಡೆದಿದೆ.

ಮರಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
Follow us on

ರಾಮನಗರ: ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮರಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಡೆಂಕಣಕೋಟೆ ಜಿಲ್ಲೆಯ ದಬ್ಬಾಗುಳಿ ಬಳಿ ನಡೆದಿದೆ.

ಅಪಘಾತದಲ್ಲಿ ಪುಟ್ಟಲಿಂಗಮ್ಮ(65), ಈರಮ್ಮ(80), ಗೌರಮ್ಮ(60), ಕೆಂಪಮ್ಮ(75)ಹಾಗೂ ಮಂಗಳಾ(35) ಸ್ಥಳದಲ್ಲೇ ಸಾವನ್ನಪಿದ್ದಾರೆ. ಮೃತರು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರು.

ಇನ್ನು ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೀರಭದ್ರೇಶ್ವರ ದೇವಸ್ಥಾನಕ್ಕೆ ಟ್ರ್ಯಾಕ್ಟರ್​ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಪರಂಗಿ ಹಣ್ಣು ತುಂಬಿಕೊಂಡು.. ಮಂಗಳಮುಖಿಯರ ಬಳಿ‌ ಹೋದ ಬೊಲೇರೋ ಚಾಲಕ ನಿಗೂಢ ಸಾವು!