AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khopoli Road Accident ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು

ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ.

Khopoli Road Accident ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು
ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದೆ
ಆಯೇಷಾ ಬಾನು
|

Updated on:Feb 16, 2021 | 2:37 PM

Share

ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳವಾರ ಸುಮಾರು 12.45ರ ಸಮಯದಲ್ಲಿ ಟ್ರಕ್ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಹೊಸ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ(NMMC) ಪಶುವೈದ್ಯಕೀಯ ವೈದ್ಯ ಹಾಗೂ ಆತನ ಕುಟುಂಬಸ್ಥರು ಅಪಘಾತಕ್ಕೀಡಾದ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಪೋಲಿ ಟೋಲ್ ಪ್ಲಾಜಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್​ವೊಂದು ಎರಡು ಕಾರುಗಳು ಹಾಗೂ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಪಶು ವೈದ್ಯ ಡಾ. ವೈಭವ್ ಜಂಜಾರೆ, ವೈದ್ಯನ ತಾಯಿ, ಹೆಂಡತಿ ಹಾಗೂ ಮಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Jalgaon Road Accident | ಜಲ್‌ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ 

Published On - 9:24 am, Tue, 16 February 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ