
ಮಹಾರಾಷ್ಟ್ರದ ಕೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳವಾರ ಸುಮಾರು 12.45ರ ಸಮಯದಲ್ಲಿ ಟ್ರಕ್ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಹೊಸ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ನ(NMMC) ಪಶುವೈದ್ಯಕೀಯ ವೈದ್ಯ ಹಾಗೂ ಆತನ ಕುಟುಂಬಸ್ಥರು ಅಪಘಾತಕ್ಕೀಡಾದ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋಪೋಲಿ ಟೋಲ್ ಪ್ಲಾಜಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ವೊಂದು ಎರಡು ಕಾರುಗಳು ಹಾಗೂ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಪಶು ವೈದ್ಯ ಡಾ. ವೈಭವ್ ಜಂಜಾರೆ, ವೈದ್ಯನ ತಾಯಿ, ಹೆಂಡತಿ ಹಾಗೂ ಮಗಳು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Jalgaon Road Accident | ಜಲ್ಗಾಂವ್ ಬಳಿ ವಾಹನ ಪಲ್ಟಿಯಾಗಿ 16 ಜನರ ಸಾವು, ಐವರಿಗೆ ಗಾಯ
Published On - 9:24 am, Tue, 16 February 21