ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jun 22, 2021 | 9:00 AM

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು