ಮಕ್ಕಳನ್ನ ಸಾಯಿಸಿ ದಂಪತಿ ಆತ್ಮಹತ್ಯೆ.. ಕೈ ಸಾಲಕ್ಕೆ ಬಲಿಯಾದವು ಅಮಾಯಕ ಐದು ಜೀವಗಳು

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ, ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಸಾಲದ ಶೂಲ ಹೆಚ್ಚಿದ್ದೇ ಇದಕ್ಕೆ ಕಾರಣ ಅಂತಾ ತಿಳಿದು ಬಂದಿದೆ.

ಮಕ್ಕಳನ್ನ ಸಾಯಿಸಿ ದಂಪತಿ ಆತ್ಮಹತ್ಯೆ.. ಕೈ ಸಾಲಕ್ಕೆ ಬಲಿಯಾದವು ಅಮಾಯಕ ಐದು ಜೀವಗಳು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 15, 2020 | 12:30 PM

ಕೈ ಸಾಲ ಹೆಚ್ಚಾಗಿ ಸಾಲ ತೀರಿಸಲಾಗದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವಳವನೂರು ಬಳಿಯ ಪಡುಪಾಳೆಯಂ ದಂಪತಿ ಮೋಹನ್ ಮತ್ತು ವಿಮಲೇಶ್ವರಿ ಸೇರಿ 8 ವರ್ಷದ ರಾಜಶ್ರೀ, 5 ವರ್ಷದ ನಿತ್ಯಶ್ರೀ ಮತ್ತು 4 ವರ್ಷದ ಶಿವಪಾಲ ಅನ್ನೋ ಮೂರು ಮುದ್ದಾದ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುದ್ದಾದ ಮೂರು ಮಕ್ಕಳೊಂದಿಗೆ ಈ ತುಂಬು ಕುಟುಂಬ ಆನಂದವಾಗಿತ್ತು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಮೋಹನ್ ಸಹ ಬಡಗಿ ಕೆಲಸ ಮಾಡಿಕೊಂಡು ಹಾಯಾಗಿ ಇದ್ರು. ಆದ್ರೆ, ಯಾವಾಗ ತಮ್ಮ ವ್ಯಾಪಾರವನ್ನ ವಿಸ್ತರಿಸಲು ಸಾಲ ಪಡೆದ್ರೋ.. ಅಲ್ಲಿಂದ ಈ ಸುಂದರ ಕುಟುಂಬಕ್ಕೆ ಕೇಡುಗಾಲ ಆರಂಭವಾಯ್ತು.

ಕೈ ಸಾಲಕ್ಕೆ ಬಲಿಯಾದವು ತಮಿಳುನಾಡಿನ ಐದು ಜೀವಗಳು! 37 ವರ್ಷದ ಮೋಹನ್​ಗೆ ಕೈ ಸಾಲ ಕೊಟ್ಟಿದ್ದವರು ಪದೇಪದೆ ಮನೆ ಬಳಿ ಬಂದು ಗಲಾಟೆ ಮಾಡ್ತಿದ್ರಂತೆ. ಅಲ್ದೆ, ಸರಿಯಾದ ಸಮಯಕ್ಕೆ ಬಡ್ಡಿ ಕೂಡ ಕಟ್ಟುತ್ತಿಲ್ಲ. ನಮ್ಮ ಸಾಲ ಶೀಘ್ರವೇ ವಾಪಸ್ ಕೊಡಿ ಅಂತಾ ಮನೆ ಬಳಿ ಬಂದು ಗಲಾಟೆ ಮಾಡಿದ್ರಂತೆ. ಇದ್ರಿಂದ ಮನನೊಂದ ಮೋಹನ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು.

ತಾವು ಸತ್ತ ಬಳಿಕ ಸಾಲಗಾರರು ಮನೆ ಬಳಿ ಬಂದು ಗಲಾಟೆ ಮಾಡ್ತಾರೆ ಅನ್ನೋ ಕಾರಣಕ್ಕೆ ಹೆಂಡತಿ, ಮಕ್ಕಳನ್ನ ಜೊತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ, ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಎಷ್ಟು ಹೊತ್ತಾದ್ರೂ. ಇವರ ಮನೆ ಬಾಗಿಲು ತೆಗೆದಿಲ್ಲ. ಇದ್ರಿಂದ ಅನುಮಾನಗೊಂಡ ನೆರೆಹೊರೆಯವರು ಬಾಗಿಲು ಒಡೆದು ನೋಡಿದಾಗ, ಈ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ನೆರೆಹೊರೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶವಗಳನ್ನ ಇಳಿಸಿ, ವಿಲ್ಲುಪುರಂ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಮೃತ ವಿಮಲೇಶ್ವರಿ ಕುಟುಂಬಸ್ಥರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು, ಕೈ ಸಾಲ ಕೊಟ್ಟಿದ್ದವರ ಹುಡುಕಾಟ ನಡೆಸಿದ್ದಾರೆ. ಒಟ್ನಲ್ಲಿ ಕೈ ಸಾಲ ಎಂಬ ಸಾಲದ ಶೂಲಕ್ಕೆ ಐವರ ತುಂಬು ಕುಟುಂಬ ಬಲಿಯಾಗಿದ್ದು ಮಾತ್ರ ವಿಪರ್ಯಾಸ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ