AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jahangirpuri Violence ಜಹಾಂಗೀರ್‌ಪುರಿ ಹಿಂಸಾಚಾರ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 5 ಆರೋಪಿಗಳ ಬಂಧನ

ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ ಅವರಿಗೆ ಕರೆ ಮಾಡಿದ್ದು ಎರಡು ದಿನಗಳ ಹಿಂದೆ ವಾಯುವ್ಯ ದೆಹಲಿಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದರು

Jahangirpuri Violence ಜಹಾಂಗೀರ್‌ಪುರಿ ಹಿಂಸಾಚಾರ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 5 ಆರೋಪಿಗಳ ಬಂಧನ
ಜಹಾಂಗೀರ್‌ಪುರಿಯಲ್ಲಿ ಭದ್ರತೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 19, 2022 | 10:28 PM

Share

ದೆಹಲಿ: ದೆಹಲಿಯ ಜಹಾಂಗೀರ್‌ಪುರಿಯಲ್ಲಿ(Jahangirpuri) ಶನಿವಾರ ನಡೆದ ಘರ್ಷಣೆ ಪ್ರಕರಣದ ಐವರು ಆರೋಪಿಗಳನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿಸಲಾಗಿದೆ. ಇದು ಯಾವುದೇ ಆರೋಪವಿಲ್ಲದೆ ಒಂದು ವರ್ಷದವರೆಗೆ ಬಂಧನಕ್ಕೆ ಅವಕಾಶ ನೀಡುತ್ತದೆ. ಎನ್ಎಸ್ಎ ಅಡಿಯಲ್ಲಿ ಆರೋಪ ಎದುರಿಸುತ್ತಿರುವವರಲ್ಲಿ ಪ್ರಮುಖ ಆರೋಪಿ ಅನ್ಸಾರ್ ಸೇರಿದ್ದಾರೆ. ಇತರ ಆರೋಪಿಗಳು ಸಲೀಂ, ಇಮಾಮ್ ಶೇಖ್ ಅಥವಾ ಸೋನು, ದಿಲ್ಶಾದ್ ಮತ್ತು ಅಹಿರ್. ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ (Rakesh Asthana) ಅವರಿಗೆ ಕರೆ ಮಾಡಿದ್ದು ಎರಡು ದಿನಗಳ ಹಿಂದೆ ವಾಯುವ್ಯ ದೆಹಲಿಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದರು. ಮೂವರು ಅಪ್ರಾಪ್ತರು ಸೇರಿದಂತೆ 24 ಜನರನ್ನು ಇದುವರೆಗೆ ಬಂಧಿಸಲಾಗಿದೆ. ಅವರಲ್ಲಿ, ಐವರ ವಿರುದ್ಧ ಕಠಿಣ ಭಯೋತ್ಪಾದನಾ-ವಿರೋಧಿ ಕಾನೂನಿನ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಪೌರತ್ವ ಕಾನೂನು ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಫೆಬ್ರವರಿ 2020 ರ ದೆಹಲಿ ಗಲಭೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, “ಗೃಹ ಸಚಿವರು ತುಂಬಾ ಸ್ಪಷ್ಟವಾಗಿದ್ದರು ಮತ್ತು ಈ ವಿಷಯವನ್ನು ತನಿಖೆ ಮಾಡುವಾಗ ಯಾವುದೇ ತಪ್ಪು ಮಾಡದಂತೆ ದೆಹಲಿ ಪೊಲೀಸರನ್ನು ಕೇಳಿಕೊಂಡರು” ಎಂದು ಹೇಳಿದರು. ತನಿಖೆಯಲ್ಲಿನ ಲೋಪದೋಷಗಳ ಕುರಿತು ದೆಹಲಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದರು. ಅನುಮತಿಯಿಲ್ಲದೆ ಹನುಮ ಜಯಂತಿ ಮೆರವಣಿಗೆ ವೇಳೆ ಶನಿವಾರ ಘರ್ಷಣೆ ನಡೆದಿದೆ.

ಜನರು ಕೇಸರಿ ಧ್ವಜಗಳನ್ನು ಹಿಡಿದುಕೊಂಡ ಮೆರವಣಿಗೆಯು ಮಸೀದಿಯಿಂದ ಹಾದುಹೋದಾಗ ಎರಡು ಗುಂಪುಗಳ ನಡುವೆ ವಾಗ್ವಾದವನ್ನು ಉಂಟಾಗಿ ಸಂಘರ್ಷಕ್ಕೆ ಕಾರಣವಾಗಿತ್ತು. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅವಿಧೇಯತೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ, ಇದು ಜಾಮೀನು ಪಡೆಯಲು ಸಾಧ್ಯವಾಗುವಂತದ್ದು.

ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತನಾ ಅವರು ಎಲ್ಲಾ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. “ಅವರ ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ” ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದುವರೆಗೆ ಬಂಧಿತರಿಂದ ಮೂರು ಸ್ವದೇಶಿ ಪಿಸ್ತೂಲ್ ಮತ್ತು ಐದು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. “ಎರಡೂ ಗುಂಪುಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತರಲ್ಲಿ ಎಂಟು ಮಂದಿ ಹಿಂದೂಗಳು ಮತ್ತು ಉಳಿದವರು ಮುಸ್ಲಿಮರು ಎಂದು ಹಿರಿಯ ಪೊಲೀಸ್ ಅಧಿಕಾರಿ ದಿಪೇಂದರ್ ಪಾಠಕ್ ಹೇಳಿದ್ದಾರೆ.

ಇದನ್ನೂ ಓದಿ:Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರದ ತನಿಖೆ ನಿಷ್ಪಕ್ಷಪಾತವಾಗಿದೆ: ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ 

Published On - 10:25 pm, Tue, 19 April 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!