AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಮಣ್ಣಿನ ದಿಬ್ಬ ಕುಸಿದು 5 ಮಂದಿ ಸಾವು; ತನಿಖೆ ಕೈಗೆತ್ತಿಕೊಂಡ ಪೊಲೀಸ್​

ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು, ಜನರ ಮೈಮೇಲೆ ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಹೋಗುವುದರೊಳಗೆ ಜೀವ ಹೋಗಿದೆ.

ರಾಜಸ್ಥಾನದಲ್ಲಿ ಮಣ್ಣಿನ ದಿಬ್ಬ ಕುಸಿದು 5 ಮಂದಿ ಸಾವು; ತನಿಖೆ ಕೈಗೆತ್ತಿಕೊಂಡ ಪೊಲೀಸ್​
ಮಣ್ಣು ಕುಸಿತದ ಸ್ಥಳ
TV9 Web
| Edited By: |

Updated on:Aug 21, 2021 | 9:45 AM

Share

ನೀರಿನ ಟ್ಯಾಂಕ್​​ ನಿರ್ಮಾಣವಾಗುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು (soil mound collapses) ಮಗು ಸೇರಿ ಒಟ್ಟು ಐವರು ಮೃತಪಟ್ಟ ಘಟನೆ ರಾಜಸ್ಥಾನ (Rajasthan)ದ ಜಾಲೋರ್​​ನಲ್ಲಿ ನಡೆದಿದೆ. ಪ್ರಸ್ತುತ ನಿರ್ಮಾಣ ತಾಣದಲ್ಲಿ ಕೆಲಸಗಾರರು ನೀರಿನ ಟ್ಯಾಂಕ್​​ನ್ನು ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಲ್ಲಿಗೆ ವಿಪತ್ತು ಪ್ರತಿಕ್ರಿಯಾ ತಂಡವೊಂದು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಈ ಮಣ್ಣಿನ ದಿಬ್ಬ ಕುಸಿತದ ವಿಷಯವನ್ನು ಸುಮ್ಮನೆ ಬಿಡಲಾಗುವುದಿಲ್ಲ. ತನಿಖೆ ನಡೆಸಲಾಗುವುದು ಎಂದು ಜಾಲೋರ್​​ನ ಡಿಎಸ್​ಪಿ ಹಿಮ್ಮತ್​ ಚರಣ್​ ತಿಳಿಸಿದ್ದಾರೆ. 

ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು, ಜನರ ಮೈಮೇಲೆ ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಹೋಗುವುದರೊಳಗೆ ಜೀವ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಾಲೋರ್​​ ಅವಘಡದಲ್ಲಿ ಮೃತಪಟ್ಟವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಗೆಹ್ಲೋಟ್​,  ನೀರಿನ ಟ್ಯಾಂಕ್​ ನಿರ್ಮಾಣವಾಗುತ್ತಿದ್ದ ಜಾಲೋರ್​​ನಲ್ಲಿ ಮಣ್ಣಿನ ದಿಬ್ಬ ಕುಸಿದು ಹೆಣ್ಣು ಮಗು ಸೇರಿ ಐವರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಮರಳಿದ ಭಾರತೀಯ ರಾಯಭಾರ ಕಚೇರಿ ಭದ್ರತಾ ಸಿಬ್ಬಂದಿ; ಬಾಗಲಕೋಟೆ ಮೂಲದ ಐಟಿಬಿಪಿ ಕಮಾಂಡೊ ಮನೆಯಲ್ಲಿ ಕಡಿಮೆಯಾಗದ ಆತಂಕ

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

(Five people, including a child, killed as soil mound collapses)

Published On - 9:31 am, Sat, 21 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ