ಪೂಂಚ್‌ನಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಐವರು ಯೋಧರು ಸಾವು, 12 ಜನರಿಗೆ ಗಾಯ

ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ. ಈ ಪರಿಣಾಮ ಐವರು ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 12 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.

ಪೂಂಚ್‌ನಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಐವರು ಯೋಧರು ಸಾವು, 12 ಜನರಿಗೆ ಗಾಯ
5 Soldiers Killed
Follow us
ಸುಷ್ಮಾ ಚಕ್ರೆ
|

Updated on: Dec 24, 2024 | 9:25 PM

ಪೂಂಚ್: ಇಂದು ಸಂಜೆ ನಡೆದ ದುರಂತ ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದೆ. ಇದರಿಂದಾಗಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.

ಇಂದು ಸಂಜೆ ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 12 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್​ಕೌಂಟರ್,​ ಐವರು ಉಗ್ರರ ಹತ್ಯೆ

ಸೇನಾ ವಾಹನವು ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಪೋಸ್ಟ್‌ಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡಿರುವ ಯೋಧರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಗಾಯಗೊಂಡ ಯೋಧರನ್ನು ಸ್ಥಳಾಂತರಿಸಲು ರಕ್ಷಣಾ ತಂಡಗಳು ಸ್ಥಳದಲ್ಲಿ ಕೆಲಸ ಮಾಡುತ್ತಿವೆ.

ಈ ತಿಂಗಳ ಆರಂಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಗಸ್ತು ತಿರುಗುತ್ತಿದ್ದಾಗ ಗಣಿ ಸ್ಫೋಟದಲ್ಲಿ ಸೇನಾ ಯೋಧ ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ