AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Results 2026: ಐದು ರಾಜ್ಯಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ, ಇಂದು ವಿಧಾನಸಭಾ ಚುನಾವಣಾ ಫಲಿತಾಂಶ

Assembly Election 2026 Results: 2026ರ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮೇ 4ರಂದು ಪ್ರಕಟಗೊಳ್ಳಲಿವೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಫಾಲ್ಟಾದಲ್ಲಿ ಮರುಮತದಾನದಿಂದಾಗಿ ಮೇ 24ಕ್ಕೆ ಫಲಿತಾಂಶ. ಇದು ರಾಷ್ಟ್ರ ರಾಜಕಾರಣದ ದಿಕ್ಕನ್ನೂ ನಿರ್ಧರಿಸಲಿದೆ.

Assembly Election Results 2026: ಐದು ರಾಜ್ಯಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ, ಇಂದು ವಿಧಾನಸಭಾ ಚುನಾವಣಾ ಫಲಿತಾಂಶ
ಸಾಂದರ್ಭಿಕ ಚಿತ್ರ Image Credit source: Deccan Chronicle
ನಯನಾ ರಾಜೀವ್
| Edited By: |

Updated on:May 04, 2026 | 7:31 AM

Share

ನವದೆಹಲಿ, ಮೇ 03: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ(Assembly Election Result)ಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣಾ ಆಯೋಗವು 2026 ರ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಿದೆ. ಸೋಮವಾರ ಸಂಜೆಯ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ ನಂತರ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ ಪ್ರಕ್ರಿಯೆಯನ್ನು ನಡೆಯುತ್ತದೆ. ಎಲ್ಲಾ ಎಣಿಕೆ ಕೇಂದ್ರಗಳಲ್ಲಿ ಬಹುಹಂತದ ಭದ್ರತಾ ಕವಚವನ್ನು ಅಳವಡಿಸಲಾಗಿದ್ದು, ಏಕಕಾಲದಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶಕ್ಕಾಗಿ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಸುದೀರ್ಘ ಮತದಾನ ಪ್ರಕ್ರಿಯೆಯ ನಂತರ, ನಾಳೆ ಬೆಳಿಗ್ಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಚಿತ್ರಣ ಸ್ಪಷ್ಟವಾಗಲಿದೆ. ನಿಖರ ಮಾಹಿತಿಗಾಗಿ results.eci.gov.in ಗೆ ಭೇಟಿ ನೀಡಬಹುದು.

ಈ ಬಾರಿಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಫಾಲ್ಟಾ ಕ್ಷೇತ್ರವು ವಿಶೇಷ ಗಮನ ಸೆಳೆದಿದೆ. ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಇಲ್ಲಿ ಆಯೋಗವು ಮಹತ್ವದ ನಿರ್ಧಾರ ಕೈಗೊಂಡಿದೆ. ಫಾಲ್ಟಾ ಕ್ಷೇತ್ರದ ಎಲ್ಲಾ 285 ಬೂತ್‌ಗಳಲ್ಲಿ ಮೇ 21 ರಂದು ಹೊಸದಾಗಿ ಮತದಾನ ನಡೆಸಲು ಆಯೋಗ ಆದೇಶಿಸಿದೆ. ಹಿಂದಿನ ಸುತ್ತಿನ ಮತದಾನದ ಸಮಯದಲ್ಲಿ ನಡೆದ ತೀವ್ರವಾದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯ ಬುಡಮೇಲು ಮಾಡುವಿಕೆಯ ವರದಿಗಳಿಂದಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ದಿಷ್ಟ ಸ್ಥಾನದ ಮತ ಎಣಿಕೆಯು ಮೇ 24 ರಂದು ನಡೆಯಲಿದೆ.

ಮತ್ತಷ್ಟು ಓದಿ: ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ, ಬೆಳಗ್ಗೆ 8ರಿಂದ ಮತ ಎಣಿಕೆ

ಐದು ರಾಜ್ಯಗಳಲ್ಲಿ ಹರಡಿರುವ 824 ಕ್ಷೇತ್ರಗಳ ಈ ಚುನಾವಣಾ ಫಲಿತಾಂಶವು ಕೇವಲ ಅಧಿಕಾರ ಹಸ್ತಾಂತರವಲ್ಲ. ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ರಾಷ್ಟ್ರಮಟ್ಟದ ಜನಬೆಂಬಲವನ್ನು ಅಳೆಯುವ ಮಾಪಕವಾಗಿದೆ. ಮೇ 4ರ ಫಲಿತಾಂಶವು ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಜನತೆಯ ತೀರ್ಪನ್ನು ಜಗತ್ತಿನ ಮುಂದೆ ತೆರೆದಿಡಲಿದೆ. ಪ್ರಜಾಪ್ರಭುತ್ವದ ಈ ದೊಡ್ಡ ಹಬ್ಬದ ಅಂತಿಮ ಫಲಿತಾಂಶವು ಭಾರತದ ರಾಜಕೀಯ ಭೂಪಟದಲ್ಲಿ ಹೊಸ ದಾಖಲೆಗಳನ್ನು ಬರೆಯುವ ನಿರೀಕ್ಷೆಯಿದೆ.

ಅಸ್ಸಾಂನಲ್ಲಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ, ಪುನರುಜ್ಜೀವನಗೊಳ್ಳುತ್ತಿರುವ ವಿರೋಧ ಪಕ್ಷದ ಮೈತ್ರಿಕೂಟದ ಸವಾಲಿನ ನಡುವೆಯೂ ತನ್ನ ಭದ್ರಕೋಟೆಯನ್ನು ರಕ್ಷಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿ ಮತದಾರರ ಮನಗೆಲ್ಲಲು ಕಸರತ್ತು ನಡೆಸಿವೆ. ಆದರೆ ಈಗಾಗಲೇ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು ಎಲ್ಲರ ಚಿತ್ತ ಫಲಿತಾಂಂಸದತ್ತ ಕೇಂದ್ರಿಕೃತವಾಗಿದೆ.

ಚುನಾವಣೆ ಘೋಷಣೆಯಾದಾಗಿನಿಂದ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಈ ಚುನಾವಣೆ ಹೆಚ್ಚು ಕುತೂಹಲ ಕೆರಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಪಾರುಮತ್ಯ ಮೆರೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಟಿಎಂಸಿ ಬುಡ ಅಲುಗಾಡಲಿದೆ ಎಂದು ಹೇಳಲಾಗುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಅಖಾಡದಲ್ಲಿ ಎರಡು ಪಕ್ಷಗಳು ಸೆಡ್ಡು ಹೊಡೆದಿರುವುದರಿಂದ ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.

ಮತ ಎಣಿಕೆಗಾಗಿ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಭದ್ರತೆಯನ್ನು ಕೈಗೊಂಡಿದೆ. ಮೊದಲು ಅಂಚೆ ಮತಪತ್ರಗಳನ್ನು (Postal Ballots) ಎಣಿಸಲಾಗುತ್ತದೆ, ನಂತರ ಇವಿಎಂ (EVM) ಮತಗಳ ಎಣಿಕೆ ನಡೆಯಲಿದೆ. ಮರು ಮತದಾನದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ಫಾಲ್ಟಾ ಕ್ಷೇತ್ರದ ಫಲಿತಾಂಶ ಮಾತ್ರ ಮೇ 24ಕ್ಕೆ ಪ್ರಕಟವಾಗಲಿದ್ದು, ಉಳಿದೆಲ್ಲಾ ಕ್ಷೇತ್ರಗಳ ಫಲಿತಾಂಶ ನಾಳೆ ಸಂಜೆಯೊಳಗೆ ಲಭ್ಯವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:41 pm, Sun, 3 May 26

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!