Lalu Prasad Yadav: ಮೇವು ಹಗರಣ; ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಜಾಮೀನು ಮಂಜೂರು

ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು.

Lalu Prasad Yadav: ಮೇವು ಹಗರಣ; ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಜಾಮೀನು ಮಂಜೂರು
ಲಾಲೂ ಪ್ರಸಾದ್ ಯಾದವ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 22, 2022 | 1:11 PM

ನವದೆಹಲಿ: ಮೇವು ಹಗರಣಕ್ಕೆ (Fodder Scam) ಸಂಬಂಧಿಸಿದಂತೆ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಇಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಜಾಮೀನು ಮಂಜೂರು ಮಾಡಿದೆ. ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಪದೇಪದೆ ಹದಗೆಡುತ್ತಿದ್ದುದರಿಂದ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಜಾಮೀನು ಮಂಜೂರು ಮಾಡಲಾಗಿದೆ. 73 ವರ್ಷದ ಲಾಲೂ ಪ್ರಸಾದ್ ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಮೇವು ಹಗರಣ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು.

ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು. ಮೇವು ಹಗರಣದ ಅವಧಿಯಲ್ಲಿ ಲಾಲೂ ಪ್ರಸಾದ್ ಯಾದವ್ ಮುಖ್ಯಮಂತ್ರಿಯಾಗಿದ್ದರು ಹಾಗೂ ಬಿಹಾರದ ಹಣಕಾಸು ಖಾತೆಯನ್ನು ಹೊಂದಿದ್ದರು. ಅಲ್ಲದೆ, ಪಶು ಸಂಗೋಪನಾ ಇಲಾಖೆ ಮೂಲಕ ಭಾರೀ ಕಿಕ್ ಬ್ಯಾಕ್ ಪಡೆದಿದ್ದರು ಎನ್ನಲಾಗಿದೆ.

ಶಿಕ್ಷೆಯನ್ನು ಅಮಾನತುಗೊಳಿಸುವಂತೆ ನಾವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಅವರು ಐದು ವರ್ಷಗಳ ಶಿಕ್ಷೆಯ ಅರ್ಧದಷ್ಟು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ನಾವು ಮನವಿ ಮಾಡಿದ್ದೇವೆ. 30 ತಿಂಗಳ ಶಿಕ್ಷೆಯ ವಿರುದ್ಧ, ಈ ಪ್ರಕರಣದಲ್ಲಿ ನಮ್ಮ ಕಕ್ಷಿದಾರರು ಈಗಾಗಲೇ 42 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದಾರೆ. ಸಿಬಿಐ ಜಾಮೀನು ಅರ್ಜಿಯನ್ನು ವಿರೋಧಿಸಿದರೂ ನ್ಯಾಯಾಲಯ ಜಾಮೀನು ನೀಡಿದೆ ಎಂದು ಲಾಲು ಪ್ರಸಾದ್ ಯಾದವ್ ಪರ ವಕೀಲ ಪ್ರಭಾತ್ ಕುಮಾರ್ ಹೇಳಿದ್ದಾರೆ.

ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೆ ಗುರಿಯಾಗಿರುವ ಲಾಲು ಪ್ರಸಾದ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಅವಿಭಜಿತ ಬಿಹಾರದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಸಾರ್ವಜನಿಕ ಹಣವನ್ನು ವಂಚನೆಯಿಂದ ಹಿಂತೆಗೆದುಕೊಳ್ಳುವಲ್ಲಿ ಒಳಗೊಂಡಿರುವ ರೂ 950 ಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಮತ್ತು ಒಟ್ಟು 60 ಲಕ್ಷ ರೂಪಾಯಿ ದಂಡಕ್ಕೆ ಗುರಿಯಾಗಿದ್ದ ಲಾಲು ಪ್ರಸಾದ್, ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.

ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಕಳೆದ ಜನವರಿ 29ರಂದು ಲಾಲೂ ಪ್ರಸಾದ್ ಯಾದವ್ ಅವರನ್ನು ಒಳಗೊಂಡಿರುವ 139.35 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣದ ವಾದಗಳನ್ನು ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಫೆಬ್ರವರಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಮೇವು ಹಗರಣ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು. ಫೆಬ್ರವರಿ 15ರಂದು ಮೇವು ಹಗರಣದ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಲಾಯಿತು. 950 ಕೋಟಿ ರೂ. ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯದವ್ ತಪ್ಪಿತಸ್ಥರೆಂದು ಸಾಬೀತಾಗಿತ್ತು. ಇದು ಅವಿಭಜಿತ ಬಿಹಾರದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಸಾರ್ವಜನಿಕ ಹಣವನ್ನು ವಂಚನೆಯಿಂದ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ್ದಾಗಿದೆ.

ಜನವರಿ 1996ರಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ ಚೈಬಾಸಾ ಉಪ ಆಯುಕ್ತ ಅಮಿತ್ ಖರೆ ನಡೆಸಿದ ದಾಳಿಯ ನಂತರ ಮೇವು ಹಗರಣ ಬೆಳಕಿಗೆ ಬಂದಿತು. ಜೂನ್ 1997ರಲ್ಲಿ ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೊದಲ ಬಾರಿಗೆ ಮೇವು ಪ್ರಕರಣದಲ್ಲಿ ಆರೋಪಿ ಎಂದು ಘೋಷಿಸಲಾಯಿತು.

ಇದನ್ನೂ ಓದಿ: Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್​

Fodder scam ಮೇವು ಹಗರಣ ಪ್ರಕರಣ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ