AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಸರ್ಕಾರದ ಉತ್ತರ ಇಲ್ಲಿದೆ

ಭಾರತ ಸರ್ಕಾರವು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನವದೆಹಲಿಯ ಲುಟಿಯೆನ್ಸ್ ಬಂಗಲೆ ವಲಯದಲ್ಲಿ ಸುರಕ್ಷಿತ ಮನೆಯಲ್ಲಿ ವಾಸಿಸುತ್ತಿದ್ದಾರೆ. 78 ವರ್ಷದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಹಿರಿಯ ಸಂಸದರು ಮತ್ತು ಉನ್ನತ ಅಧಿಕಾರಿಗಳಿಗೆ ನೀಡಲಾಗುವ ರೀತಿಯದ್ದೇ ಬಂಗಲೆಯನ್ನು ನೀಡಲಾಗಿದೆ. ಆದರೆ, ಬಾಂಗ್ಲಾದೇಶದ ನ್ಯಾಯಾಲಯ ಶೇಖ್ ಹಸೀನಾ ಅವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಹೀಗಾಗಿ ಅವರು ಇನ್ನೂ ಎಷ್ಟು ದಿನ ಭಾರತದಲ್ಲಿ ಉಳಿಯಲು ಅವಕಾಶವಿದೆ ಎಂಬುದರ ಮಾಹಿತಿ ಇಲ್ಲಿದೆ.

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಸರ್ಕಾರದ ಉತ್ತರ ಇಲ್ಲಿದೆ
Sheikh Hasina With Modi
ಸುಷ್ಮಾ ಚಕ್ರೆ
|

Updated on: Dec 06, 2025 | 6:53 PM

Share

ನವದೆಹಲಿ, ಡಿಸೆಂಬರ್ 6: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಡಾಕಾದ ನ್ಯಾಯಮಂಡಳಿ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಕಳೆದ ವರ್ಷದಿಂದ ಶೇಖ್ ಹಸೀನಾ (Sheikh Hasina) ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ. ಮರಣದಂಡನೆ ಶಿಕ್ಷೆಗೆ ಒಳಗಾಗಿರುವುದರಿಂದ ಅವರು ಭಾರತದಲ್ಲಿಯೇ ಇನ್ನೂ ಎಷ್ಟು ಸಮಯ ವಾಸ್ತವ್ಯ ಹೂಡಬಹುದು ಎಂಬುದರ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. ಶೆಕ್ ಹಸೀನಾ ಭಾರತವನ್ನು ತೊರೆಯುವುದು ಅಥವಾ ಇಲ್ಲೇ ಇರುವುದು ಅವರ ವೈಯಕ್ತಿಕ ನಿರ್ಧಾರ. ಅವರು ಎಷ್ಟು ಸಮಯ ಬೇಕಾದರೂ ಇಲ್ಲಿಯೇ ಇರಬಹುದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಭಾರತವು ಶೇಖ್ ಹಸೀನಾಗೆ ಬಯಸಿದಷ್ಟು ಕಾಲ ಇರಲು ಅವಕಾಶ ನೀಡುತ್ತದೆಯೇ? ಎಂದು ಕೇಳಿದಾಗ ಉತ್ತರಿಸಿರುವ ಸಚಿವ ಜೈಶಂಕರ್, ಅವರು ಒಂದು ನಿರ್ದಿಷ್ಟ ಸನ್ನಿವೇಶದಲ್ಲಿ ಇಲ್ಲಿಗೆ ಬಂದರು. ಅದು ಅವರ ನಿರ್ಧಾರವಾಗಿತ್ತು. ಹಾಗೆಯೇ ಇಲ್ಲಿಂದ ತೆರಳುವುದು ಕೂಡ ಅವರ ವೈಯಕ್ತಿಕ ನಿರ್ಧಾರವಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Sheikh Hasina: ಶೇಖ್ ಹಸೀನಾಗೆ ಗಲ್ಲುಶಿಕ್ಷೆ; ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರವಾಗುತ್ತಾರಾ ಮಾಜಿ ಪ್ರಧಾನಿ?

ಬಾಂಗ್ಲಾದೇಶದಲ್ಲಿ ಉಂಟಾದ ರಾಜಕೀಯ ಅಶಾಂತಿಯ ನಂತರ ಕಳೆದ ವರ್ಷ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಅವರ ಅಧಿಕಾರಾವಧಿಯಲ್ಲಿ ಗಲಭೆ ಉಂಟಾಗಿ ನೂರಾರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಗಾಯಗೊಂಡರು. ಹೀಗಾಗಿ, ಕಳೆದ ತಿಂಗಳು ಶೇಖ್ ಹಸೀನಾ ಅವರಿಗೆ ವಿಶೇಷ ನ್ಯಾಯಮಂಡಳಿಯು ಮರಣದಂಡನೆ ವಿಧಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!