AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agniveer Scheme: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಮೊದಲ ಬಾರಿಗೆ 341 ಮಹಿಳೆಯರ ನೇಮಕ

ಸುಮಾರು 3,000 ಅಗ್ನಿವೀರ್‌ಗಳನ್ನು ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿದ್ದು, ಅವರಲ್ಲಿ 341 ಮಹಿಳೆಯರು ಇದ್ದಾರೆ.

Agniveer Scheme: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಮೊದಲ ಬಾರಿಗೆ 341 ಮಹಿಳೆಯರ ನೇಮಕ
TV9 Web
| Updated By: ಸುಷ್ಮಾ ಚಕ್ರೆ|

Updated on:Dec 03, 2022 | 3:33 PM

Share

ನವದೆಹಲಿ: ಅಗ್ನಿವೀರ್ ಯೋಜನೆಯಡಿ (Agniveer Scheme) ಇದೇ ಮೊದಲ ಬಾರಿಗೆ 341 ಮಹಿಳಾ ನಾವಿಕರು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿದ್ದಾರೆ. ನೌಕಾಪಡೆಯ ದಿನದ ಮುನ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ಸುಮಾರು 3,000 ಅಗ್ನಿವೀರ್‌ಗಳನ್ನು ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿದ್ದು, ಅವರಲ್ಲಿ 341 ಮಹಿಳೆಯರು ಇದ್ದಾರೆ. ಭಾರತೀಯ ನೌಕಾಪಡೆಯಲ್ಲಿ (Indian Navy) ಲಭ್ಯವಿರುವ ಹುದ್ದೆಗಳನ್ನು ಕೋರಿ 10 ಲಕ್ಷ ಜನ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿದಾರರ ಪೈಕಿ 82,000 ಮಹಿಳೆಯರಿದ್ದರು ಎಂದು ಅವರು ಹೇಳಿದ್ದಾರೆ.

ಅಗ್ನಿವೀರ್ ಯೋಜನೆಯಡಿ ಮಹಿಳೆಯರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅರ್ಹತೆ ಪಡೆಯಲು ಪುರುಷರು ಮತ್ತು ಮಹಿಳೆಯರು ಇಬ್ಬರೂ ಒಂದೇ ರೀತಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಎಂದು ನೌಕಾಪಡೆಯ ಮುಖ್ಯಸ್ಥರು ದೃಢಪಡಿಸಿದ್ದಾರೆ.

ಇದನ್ನೂ ಓದಿ: Air Force Day: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ, ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರ್​ಗಳ ನೇಮಕ; ಐಎಎಫ್​ ಮುಖ್ಯಸ್ಥ ಘೋಷಣೆ

ಭಾರತೀಯ ನೌಕಾಪಡೆಯು 2047ರ ವೇಳೆಗೆ ‘ಆತ್ಮನಿರ್ಭರ್’ ಆಗಲಿದೆ ಎಂದು ಸರ್ಕಾರಕ್ಕೆ ಭರವಸೆ ನೀಡಿದೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾದ ವಿವಿಧ ಮಿಲಿಟರಿ ಮತ್ತು ಸಂಶೋಧನಾ ಹಡಗುಗಳ ಚಲನವಲನಗಳ ಮೇಲೆ ನೌಕಾಪಡೆಯು ಬಲವಾದ ನಿಗಾ ಇರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಭಾರತೀಯ ನೌಕಾಪಡೆಯು ಅತ್ಯಂತ ಹೆಚ್ಚಿನ ಕಾರ್ಯಾಚರಣೆಯ ವೇಗವನ್ನು ಸಾಧಿಸಿದೆ. ಭಾರತವು ಮುಂದೆ ಸಾಗುತ್ತಿರುವಾಗ ಕಡಲ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅಡ್ಮಿರಲ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Sat, 3 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!