AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ ಸದ್ಯ! ದೇಶದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಯ್ತು..

ದೆಹಲಿ: ರಣಹಂತಕ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಹೆಚ್ಚಿಸುತ್ತಲೇ ಬಂದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಆದರೆ ಇದೇ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಒಟ್ಟು ಜನರ ಸಂಖ್ಯೆ ಏಕಾಏಕಿ ಹೆಚ್ಚಿದೆ. ಹೆಚ್‌ಟಿಯ ಕೋವಿಡ್ -19 ಡ್ಯಾಶ್‌ಬೋರ್ಡ್ ಪ್ರಕಾರ, ಮಂಗಳವಾರ ಸಂಜೆಯ ವರೆಗೆ, ಸೋಂಕಿತ ರೋಗಿಗಳಿಗಿಂತ 1,375 ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ವರದಿಯಾಗಿದೆ. ಕಳೆದ ವಾರದಲ್ಲಿ, ರಾಷ್ಟ್ರೀಯ ಸರಾಸರಿಯಲ್ಲಿ ಪ್ರತಿದಿನ ಸುಮಾರು 4,529 ಹೊಸ ಸಕ್ರಿಯ ಪ್ರಕರಣಗಳನ್ನು […]

ಅಬ್ಬಾ ಸದ್ಯ! ದೇಶದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಯ್ತು..
ಆಯೇಷಾ ಬಾನು
|

Updated on:Jun 11, 2020 | 3:58 PM

Share

ದೆಹಲಿ: ರಣಹಂತಕ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಹೆಚ್ಚಿಸುತ್ತಲೇ ಬಂದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಆದರೆ ಇದೇ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಒಟ್ಟು ಜನರ ಸಂಖ್ಯೆ ಏಕಾಏಕಿ ಹೆಚ್ಚಿದೆ.

ಹೆಚ್‌ಟಿಯ ಕೋವಿಡ್ -19 ಡ್ಯಾಶ್‌ಬೋರ್ಡ್ ಪ್ರಕಾರ, ಮಂಗಳವಾರ ಸಂಜೆಯ ವರೆಗೆ, ಸೋಂಕಿತ ರೋಗಿಗಳಿಗಿಂತ 1,375 ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ವರದಿಯಾಗಿದೆ.

ಕಳೆದ ವಾರದಲ್ಲಿ, ರಾಷ್ಟ್ರೀಯ ಸರಾಸರಿಯಲ್ಲಿ ಪ್ರತಿದಿನ ಸುಮಾರು 4,529 ಹೊಸ ಸಕ್ರಿಯ ಪ್ರಕರಣಗಳನ್ನು ಸೇರಿಸಲಾಗುತ್ತಿತ್ತು. ಹಾಗೂ ಪ್ರತಿದಿನ 5,397 ರೋಗಿಗಳು ಸೋಂಕಿನಿಂದ ಗುಣಮುಖರಾಗುತ್ತಿದ್ದರು. ಇದೇ ಮಾದರಿಯಲ್ಲಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ಈ ಅಂತರವು ವಿಸ್ತರಿಸುವ ಸಾಧ್ಯತೆಯಿದೆ.

ಭಾರತದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಲೂ ಮುಖ್ಯ ಕಾರಣ ಅಂದ್ರೆ ಇಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ. ಸೋಂಕಿತರಲ್ಲಿ 2.8% ಜನರು ಇಲ್ಲಿಯವರೆಗೆ ಸಾವನ್ನಪ್ಪಿರುವುದರಿಂದ, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಹಾಗೂ ಕಳೆದ ತಿಂಗಳುಗಳಿಗೆ ಹೋಲಿಸಿದರೆ ಮೇ ತಿಂಗಳಲ್ಲಿ ಚೇತರಿಕೆ ಕಾಣಿತ್ತಿರುವವರ ಸಂಖ್ಯೆ ಹೆಚ್ಚಿದೆ.

ವಿಶೇಷವಾಗಿ ಮೇ ತಿಂಗಳಿನಲ್ಲಿ ವರದಿಯಾದ 155,668 ಹೊಸ ಪ್ರಕರಣಗಳು ಬಿಡುಗಡೆಯಾಗಲು ಪ್ರಾರಂಭಿಸಿದಾಗ ಚೇತರಿಕೆಯ ವೇಗವನ್ನು ಪಡೆದುಕೊಂಡಿತು. ಮೇ 29 ರಂದು ಭಾರತವು 11,707 ಹೊಸ ಚೇತರಿಕೆಕಂಡಿರುವುದರ ಬಗ್ಗೆ ವರದಿ ಮಾಡಿದೆ. ಮಹಾರಾಷ್ಟ್ರದ ಸಹಾಯದಿಂದ ಒಂದೇ ದಿನದಲ್ಲಿ 8,381 ರೋಗಲಕ್ಷಣವಿಲ್ಲದ ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ದೇಶದಲ್ಲಿ ನಡೆಸಿದ ಒಟ್ಟು ಪರೀಕ್ಷೆಗಳ ಸಂಖ್ಯೆ 5 ಮಿಲಿಯನ್ ದಾಟಿದೆ. ಮಂಗಳವಾರ ರಾತ್ರಿಯ ಹೊತ್ತಿಗೆ, ಭಾರತ 5,061,332 ಮಾದರಿಗಳನ್ನು ಪರೀಕ್ಷಿಸಿದೆ.

Published On - 6:45 am, Thu, 11 June 20

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?