AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಲಿರುವ ವಿದೇಶಿ ಗಣ್ಯರ ಬಗ್ಗೆ ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿ ಪ್ರಮಾಣವಚನ ಕಾರ್ಯಕ್ರಮ ಇಂದು ನಡೆಯಲಿದ್ದು, ವಿದೇಶಿ ಗಣ್ಯರು ಆಗಮಿಸುತ್ತಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್​ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಸೇರಿದಂತೆ ಹಲವರು ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಲಿರುವ ವಿದೇಶಿ ಗಣ್ಯರ ಬಗ್ಗೆ ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 09, 2024 | 9:50 AM

Share

ನರೇಂದ್ರ ಮೋದಿ(Narendra Modi)ಯವರು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ವಿದೇಶಿ ಗಣ್ಯರು ಆಗಮಿಸುತ್ತಿದ್ದಾರೆ. ಸಮಾರಂಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ನೆರೆಯ ಮತ್ತು ಹಿಂದೂ ಮಹಾಸಾಗರದ ಏಳು ದೇಶಗಳ ನಾಯಕರು ಭಾಗವಹಿಸಲಿದ್ದಾರೆ.

ಶೇಖ್​ ಹಸೀನಾ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಈಗಾಗಲೇ ದೆಹಲಿ ತಲುಪಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಹಸೀನಾ ಮತ್ತು ಅಫೀಫ್ ಹೊರತುಪಡಿಸಿ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಮತ್ತು ಪ್ರಧಾನಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಕೂಡ ಆಗಮಿಸಲಿದ್ದಾರೆ.

2014 ಮತ್ತು 2019ರಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿತ್ತು, ಆದರೆ ಈ ಸಲ ಕೇವಲ 240 ಸೀಟುಗಳನ್ನು ಮಾತ್ರ ಗೆದ್ದುಕೊಂಡಿದೆ. ಸರ್ಕಾರ ರಚನೆಗೆ 272 ಕ್ಷೇತ್ರಗಳನ್ನು ಗೆಲ್ಲುವುದು ಕಡ್ಡಾಯವಾಗಿದ್ದರಿಂದ ಮೈತ್ರಿ ಪಕ್ಷಗಳ ಸಹಕಾರ ಬೇಕು.

ಮತ್ತಷ್ಟು ಓದಿ: PM Modi Swearing in Ceremony: ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಮೋದಿ ಪ್ರಮಾಣವಚನ, ಇಡೀ ದೆಹಲಿಗೆ 3 ಹಂತದ ಭದ್ರತಾ ವ್ಯವಸ್ಥೆ

ಈಗ ಬಿಜೆಪಿ ಪಾಲಿಗೆ ಆಧಾರಸ್ತಂಭವಾಗಿರುವುದು ಜೆಡಿಯು ಹಾಗೂ ಟಿಡಿಪಿ ಪಕ್ಷಗಳು. ಹೀಗಾಗಿ ಜೆಡಿಯು ನಿತೀಶ್​ ಕುಮಾರ್ ಹಾಗೂ ಟಿಡಿಪಿಯ ಚಂದ್ರಬಾಬು ನಾಯ್ಡು ಅವರು ಕಿಂಗ್​ಮೇಕರ್​ಗಳಾಗಿ ಗುರುತಿಸಿಕೊಂಡಿದ್ದಾರೆ. ಬಿಜೆಪಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

ಬಿಜೆಪಿಯಲ್ಲಿ ಅಮಿತ್ ಶಾ, ನಿತಿನ್ ಗಡ್ಕರಿ, ಪ್ರಲ್ಹಾದ್ ಜೋಶಿ, ರಾಜನಾಥ್​ ಸಿಂಗ್, ಎಸ್​ ಜೈಶಂಕರ್​ ಮತ್ತಿತರರು ಕ್ಯಾಬಿನೆಟ್​ನಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ