ರಾಜ್ಯಸಭೆಗೆ ಎಸ್ ಜೈಶಂಕರ್, ಡೆರೆಕ್ ಓಬ್ರಿಯಾನ್ ಸೇರಿದಂತೆ 11 ಮಂದಿ ಅವಿರೋಧ ಆಯ್ಕೆ

ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರೆಂದರೆ ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್.

ರಾಜ್ಯಸಭೆಗೆ ಎಸ್ ಜೈಶಂಕರ್, ಡೆರೆಕ್ ಓಬ್ರಿಯಾನ್ ಸೇರಿದಂತೆ 11 ಮಂದಿ ಅವಿರೋಧ ಆಯ್ಕೆ
ಎಸ್.ಜೈಶಂಕರ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 17, 2023 | 2:04 PM

ದೆಹಲಿ ಜುಲೈ 17: ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್  ಓಬ್ರಿಯಾನ್ (Derek O’Brien) ಸೇರಿದಂತೆ 11 ನಾಯಕರು ರಾಜ್ಯಸಭೆಗೆ (Rajya Sabha) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಒಂದು ಸ್ಥಾನವನ್ನು ಗಳಿಸಿದೆ. ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯಲ್ಲಿ ಇದು 93 ಸದಸ್ಯರನ್ನು ಹೊಂದಿದೆ.

ಜುಲೈ 24 ರಂದು ಪಶ್ಚಿಮ ಬಂಗಾಳದಲ್ಲಿ ಆರು, ಗುಜರಾತ್‌ನಲ್ಲಿ ಮೂರು ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಮತದಾನ ನಡೆಯುವುದಿಲ್ಲ. ಆರು ತೃಣಮೂಲ ಕಾಂಗ್ರೆಸ್ ಮತ್ತು ಐದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರೆಂದರೆ ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಕಳೆದುಕೊಂಡು ಸದಸ್ಯರ ಸಂಖ್ಯೆ 30 ಕ್ಕೆ ಇಳಿಯಲಿದೆ.

245 ಸದಸ್ಯರ ರಾಜ್ಯಸಭೆಯಲ್ಲಿ ಏಳು ಸ್ಥಾನಗಳು ಜುಲೈ 24 ರ ನಂತರ ತೆರವಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕು ಸ್ಥಾನಗಳು, ಎರಡು ನಾಮನಿರ್ದೇಶಿತ ಸ್ಥಾನಗಳು ಮತ್ತು ಉತ್ತರ ಪ್ರದೇಶದಲ್ಲಿ ಒಂದು ಸ್ಥಾನ ಖಾಲಿ ಇರಲಿದೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ 2,381 ಕೋಟಿ ಮೌಲ್ಯದ 1.44 ಲಕ್ಷ ಕೆಜಿ ಡ್ರಗ್ಸ್ ನಾಶ

ರಾಜ್ಯಸಭೆಯಲ್ಲಿ ಒಟ್ಟು ಸ್ಥಾನಗಳು 238ಕ್ಕೆ ಇಳಿಯಲಿದ್ದು, ಬಹುಮತದ ಸಂಖ್ಯೆ 120 ಆಗಲಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 105 ಸದಸ್ಯರನ್ನು ಹೊಂದಿದ್ದು, ಐವರು ನಾಮನಿರ್ದೇಶಿತ ಮತ್ತು ಇಬ್ಬರು ಸ್ವತಂತ್ರ ಸಂಸದರ ಬೆಂಬಲವನ್ನೂ ಬಿಜೆಪಿ ಗೆಲ್ಲುವುದು ನಿಶ್ಚಿತ. ಹಾಗಾಗಿ ಸರ್ಕಾರದ ಪರವಾಗಿ ಇರುವ ಸದಸ್ಯರ ಸಂಖ್ಯೆ 112 ಆಗಲಿದ್ದು, ಬಹುಮತಕ್ಕೆ ಎಂಟು ಸ್ಥಾನ ಕಮ್ಮಿ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Mon, 17 July 23

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್