
ಲಕ್ನೋ: ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ.
ನಿನ್ನೆ ವೀಕೆಂಡ್ ಪಾರ್ಟಿಯಲ್ಲಿ..
ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ.
ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್ ಕ್ಯಾನ್ ಮತ್ತು 51 ಮದ್ಯದ ಬಾಟಲ್ಗಳನ್ನು ಜಪ್ತಿ ಮಾಡಲಾಗಿದೆ. ಆದ್ರೆ, ಮಾದಕ ವಸ್ತುಗಳ ಬಳಕೆ ಬಗ್ಗೆ ತಕ್ಷಣಕ್ಕೆ ಮಾಹಿತಿಯಿನ್ನೂ ಸಿಕ್ಕಿಲ್ಲ.