MDT23: ನಾಲ್ವರನ್ನು ಕೊಂದಿದ್ದ ನರಭಕ್ಷಕ ಹುಲಿ ಜೀವಂತ ಸೆರೆ; ನಿಟ್ಟುಸಿರು ಬಿಟ್ಟ ನೀಲಗಿರಿ ಜನ

ಹುಲಿಯ ಹತ್ಯೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ನೀಡಿದ್ದರು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಕೊನೆಗೆ ಜೀವಂತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.

MDT23: ನಾಲ್ವರನ್ನು ಕೊಂದಿದ್ದ ನರಭಕ್ಷಕ ಹುಲಿ ಜೀವಂತ ಸೆರೆ; ನಿಟ್ಟುಸಿರು ಬಿಟ್ಟ ನೀಲಗಿರಿ ಜನ
ಹುಲಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Oct 15, 2021 | 3:48 PM

ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ನರಹಂತಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ, ಎಸ್.ಟಿ.ಎಫ್‌. ನಿಂದ 22 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಹುಲಿ ಸೆರೆ ಹಿಡಿಯಲಾಗಿದೆ. ಇದುವರೆಗೂ ನಾಲ್ವರನ್ನು ಹತ್ಯೆ ಮಾಡಿರುವ MDT-23 ಹುಲಿ‌ ಸೆರೆಯಾಗಿದೆ. ಭಾರೀ ಆತಂಕ ಸೃಷ್ಟಿಸಿದ್ದ ಎಮ್​ಡಿಟಿ-23 ಹುಲಿ ಕೊನೆಗೂ ಜೀವಂತ ಸೆರೆ ಸಿಕ್ಕಿದೆ. ಇದರಿಂದ ನೀಲಗಿರಿ ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಹುಲಿಯ ಹತ್ಯೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ನೀಡಿದ್ದರು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಕೊನೆಗೆ ಜೀವಂತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ನರಭಕ್ಷಕ ಹುಲಿಯ ಕಾಟ ಮಿತಿಮೀರಿತ್ತು. ಕಳೆದ ಕೆಲ ದಿನಗಳಿಂದ ನಾಲ್ವರು ವ್ಯಕ್ತಿಗಳನ್ನು ಹುಲಿ ಕೊಂದು ಹಾಕಿತ್ತು. 20 ಜಾನುವಾರುಗಳನ್ನು ತಿಂದು ಹಾಕಿತ್ತು. ಇದರಿಂದಾಗಿ ತಮಿಳುನಾಡಿನ ಪ್ರಧಾನ ಮುಖ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ವಾರ್ಡನ್ ಈ ನರಭಕ್ಷಕ ಹುಲಿಯನ್ನು ಬೇಟೆಯಾಡಿ ಕೊಲ್ಲಲು ಆದೇಶ ಹೊರಡಿಸಿದ್ದರು. ಆದರೂ, ಅರಣ್ಯ ಇಲಾಖೆಯ ಅಧಿಕಾರಿಗಳು ಸಂಯಮದಿಂದ ಹುಲಿ ಸೆರೆಗೆ ಆದ್ಯತೆ ನೀಡಿ ಕಾರ್ಯಾಚರಣೆ ನಡೆಸಿದ್ದರು.

ನರಭಕ್ಷಕ ಹುಲಿಗೆ MDT-23 ಎಂದು ಹೆಸರಿಡಲಾಗಿತ್ತು. ಹುಲಿ ಬೇಟೆಯ ಸಂಪೂರ್ಣ ಅಪರೇಷನ್ ಅನ್ನು ವಿಡಿಯೋ ರೆಕಾರ್ಡ್ ಮತ್ತು ಪೋಟೋಗ್ರಾಫ್​ನಲ್ಲಿ ರೆಕಾರ್ಡ್ ಮಾಡಬೇಕು. ಅಪರೇಷನ್ ಮುಗಿದ ಬಳಿಕ ಅವರ ವಿಸ್ತೃತ ವರದಿಯನ್ನು ತಮಗೆ ಸಲ್ಲಿಸಬೇಕೆಂದು ಪ್ರಧಾನ ಮುಖ್ಯ ಅರಣ್ಯ, ವನ್ಯಜೀವಿ ಸಂರಕ್ಷಣೆಯ ವಾರ್ಡನ್ ಶೇಖರ್ ಕುಮಾರ್ ನೀರಜ್ ಆದೇಶ ಹೊರಡಿಸಿದ್ದರು.

ಟಿ23 ಹುಲಿಯನ್ನು ಅನಸ್ತೇಶಿಯಾ ಬಳಸಿ ಮಯಾರ್ ರಸ್ತೆಯ ಬಳಿ ಜೀವಂತವಾಗಿ ಸೆರೆಹಿಡಿಯಲಾಗಿದೆ ಎಂದು ಈ ಕೆಳಗಿನ ಟ್ವೀಟ್​ನಲ್ಲಿ ಬರೆಯಲಾಗಿದೆ.

ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿಗಳ ಮನವಿ ಮೇರೆಗೆ ಕೇರಳ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಹುಲಿ ಬೇಟೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ತಮಿಳುನಾಡಿನ ಈರೋಡ್ ಜಿಲ್ಲೆಯ ಅರಣ್ಯಾಧಿಕಾರಿಗಳು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಆದರೆ, ಹುಲಿಯನ್ನು ಸೆರೆ ಹಿಡಿಯಲು ಮಾತ್ರ ಸಾಧ್ಯವಾಗಿಲ್ಲ. ದೇವನ್ ಎಸ್ಟೇಟ್​ ನಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇದೆ. ದಟ್ಟವಾದ ಕಾಫಿ ಎಸ್ಟೇಟ್​ನ ಗಿಡ ಮರಗಳು, ಬೆಟ್ಟಗುಡ್ಡಗಳ ಭೂಪ್ರದೇಶ, ಸ್ಥಳೀಯರಿಂದ ಎದುರಾಗುತ್ತಿರುವ ಅಡ್ಡಿಗಳಿಂದ ಹುಲಿಯನ್ನು ಸೆರೆ ಹಿಡಿಸಲು ಸಾಧ್ಯವಾಗುತ್ತಿಲ್ಲ ಎಂದು ಶೇಖರ್ ಕುಮಾರ್ ನೀರಜ್ ತಮ್ಮ ಆದೇಶದಲ್ಲಿ ಹೇಳಿದ್ದರು.

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ಇದನ್ನೂ ಓದಿ: ಬಂಡಿಪುರ ಅರಣ್ಯದಲ್ಲಿ ಹುಲಿ ಕಳೆಬರ ಪತ್ತೆ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

Published On - 3:36 pm, Fri, 15 October 21

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ