AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

XBB.1.16 ಹೊಸ ಕೋವಿಡ್ ಅಲೆಗೆ ಕಾರಣವಾಗುತ್ತದೆಯೇ? ಏಮ್ಸ್ ಮಾಜಿ ನಿರ್ದೇಶಕರು ಹೇಳಿದ್ದೇನು?

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗಿದೆ.ಎಲ್ಲಾ ವೈರಸ್-ಪ್ರೇರಿತ ನಿರ್ಬಂಧಗಳನ್ನು ತೆಗೆದುಹಾಕಿರುವ ದೇಶದಲ್ಲಿ ಸಾಂಕ್ರಾಮಿಕದ ಮತ್ತೊಂದು ಅಲೆಯ ಭಯ ಮನೆ ಮಾಡಿದೆ.

XBB.1.16 ಹೊಸ ಕೋವಿಡ್ ಅಲೆಗೆ ಕಾರಣವಾಗುತ್ತದೆಯೇ? ಏಮ್ಸ್ ಮಾಜಿ ನಿರ್ದೇಶಕರು ಹೇಳಿದ್ದೇನು?
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 23, 2023 | 8:30 AM

Share

ಕೊರೊನಾವೈರಸ್‌ನ (Coronavirus) ಹೊಸ XBB.1.16 ರೂಪಾಂತರವು ಕೋವಿಡ್ -19 (Covid 19) ಪ್ರಕರಣಗಳಲ್ಲಿ ಇತ್ತೀಚಿನ ಏರಿಕೆಗೆ ಕಾರಣವಾಗಬಹುದು. ಆದರೆ ಇದು ತೀವ್ರವಾದ ಅನಾರೋಗ್ಯ, ಆಸ್ಪತ್ರೆಗೆ ದಾಖಲು ಮತ್ತು ಸಾವುಗಳಿಗೆ ಕಾರಣವಾಗದಿರುವವರೆಗೆ ಚಿಂತಿಸಬೇಕಾಗಿಲ್ಲ ಎಂದು ಏಮ್ಸ್ ಮಾಜಿ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಬುಧವಾರ ಹೇಳಿದ್ದಾರೆ. ವೈರಸ್ ಕಾಲಾಂತರದಲ್ಲಿ ರೂಪಾಂತರಗೊಳ್ಳುತ್ತಿರುವುದರಿಂದ ಹೊಸ ರೂಪಾಂತರಗಳು ಬರುತ್ತಲೇ ಇರುತ್ತವೆ. ಹೀಗಿರುವಾಗ XBB 1.16 ಒಂದು ರೀತಿಯ ನ್ಯೂ ಕಿಡ್ ಆನ್ ದಿ ಬ್ಲಾಕ್ ಆಗಿದೆ ಎಂದು ಗುಲೇರಿಯಾ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಎಲ್ಲಿಯವರೆಗೆ ಅದು ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು ಮತ್ತು ಸಾವುಗಳಿಗೆ ಕಾರಣವಾಗುವುದಿಲ್ಲವೋ ಅಲ್ಲಿಯವರೆಗೆ ಆತಂಕ ಬೇಡ. ಏಕೆಂದರೆ ಸೋಂಕಿತರು ಸೌಮ್ಯವಾದ ಅನಾರೋಗ್ಯವನ್ನು ಹೊಂದಿದ್ದರೆ ಜನಸಂಖ್ಯೆಗೆ ಸ್ವಲ್ಪ ಮಟ್ಟಿಗೆ ಪ್ರತಿರೋಧ ನೀಡಲು ಸಹಾಯ ಮಾಡುತ್ತದೆ ಎಂದು ಎಂದು ರಾಷ್ಟ್ರೀಯ ಕೋವಿಡ್ ಕಾರ್ಯದ ಭಾಗವಾಗಿದ್ದ ಖ್ಯಾತ ಶ್ವಾಸಕೋಶಶಾಸ್ತ್ರಜ್ಞ ಗುಲೇರಿಯಾ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗಿದೆ.ಎಲ್ಲಾ ವೈರಸ್-ಪ್ರೇರಿತ ನಿರ್ಬಂಧಗಳನ್ನು ತೆಗೆದುಹಾಕಿರುವ ದೇಶದಲ್ಲಿ ಸಾಂಕ್ರಾಮಿಕದ ಮತ್ತೊಂದು ಅಲೆಯ ಭಯ ಮನೆ ಮಾಡಿದೆ. ಭಾರತದಲ್ಲಿ ಮಂಗಳವಾರ 1,134 ಹೊಸ ಹೊಸ ಸೋಂಕುಗಳು ದಾಖಲಾಗಿವೆ, ಇದು 138 ದಿನಗಳಲ್ಲಿ ಅತಿ ಹೆಚ್ಚು. ಸಕ್ರಿಯ ಪ್ರಕರಣಗಳು 7,026 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. XBB.1.16 ರೂಪಾಂತರವು ಮುಂದಿನ ಕೆಲವು ದಿನಗಳಲ್ಲಿ ಕೋವಿಡ್ ತರಂಗವನ್ನು ಉಂಟು ಮಾಡುವ ಸಾಮರ್ಥ್ಯವನ್ನು ಹೊಂದಿದೆಯೇ ಎಂದು ಕೇಳಿದಾಗ, “ನೀವು ಪ್ರಕರಣಗಳ ಸಂಖ್ಯೆಯಲ್ಲಿ ಉಲ್ಬಣವನ್ನು ನೋಡಬಹುದು” ಆದರೆ ನಂತರ ಅದು ಕಡಿಮೆಯಾಗುತ್ತಾ ಬರಬಹುದು ಎಂದಿದ್ದಾರೆ.

ಜನರಲ್ಲಿ ಈಗ ಜ್ವರ ತರಹದ ರೋಗಲಕ್ಷಣಗಳು ಕಂಡು ಬಂದರೂ ಹೆಚ್ಚಿನ ಜನರು ಪರೀಕ್ಷಿಸಿಕೊಳ್ಳುವುದಿಲ್ಲ. ಕೆಲವರು ಕ್ಷಿಪ್ರ ಆಂಟಿಜನ್ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಹಾಗಾಗಿ ಅವರು ಪಾಸಿಟಿವ್ ಆಗಿದ್ದರೂ ಅದು ವರದಿಯಾಗುವುದಿಲ್ಲ. ಆದ್ದರಿಂದ ನಾವು ನಿಜವಾಗಿ ವರದಿ ಮಾಡುತ್ತಿರುವ ಸಂಖ್ಯೆಯು ಸಮುದಾಯದಲ್ಲಿನ ನಿಜವಾದ ಸಂಖ್ಯೆಗಿಂತ ಕಡಿಮೆಯಿರಬಹುದು ಎಂದು ಅವರು ಹೇಳಿದ್ದಾರೆ. ಆದ್ದರಿಂದ ನಾವು ಉಲ್ಬಣವನ್ನು ಕಂಡರೂ ಸಹ, ಚಿಂತಿಸಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದ ಕೋವಿಡ್ ಮತ್ತು ಇನ್ಫ್ಲುಯೆನ್ಸ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ಸಾರ್ವಜನಿಕ ಆರೋಗ್ಯದ ಸನ್ನದ್ಧತೆಯ ಬಗ್ಗೆಯೂ ಅವಲೋಕನ ನಡೆಸಿದ್ದಾರೆ. ರೋಗಿಗಳು, ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಸೂಕ್ತ ನಡವಳಿಕೆ ಅನುಸರಿಸುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

ಆರೋಗ್ಯ ಸಂಬಂಧಿತ  ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ