Chandrababu Naidu: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Chandrababu Naidu Judicial Remand Extended: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ.

Chandrababu Naidu: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಚಂದ್ರಬಾಬು ನಾಯ್ಡು
Follow us
|

Updated on:Sep 22, 2023 | 12:32 PM

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ.

ಪೊಲೀಸರು ನಾಯ್ಡು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಹಿಂದೆ ವಿಧಿಸಲಾಗಿದ್ದ ಬಂಧನದ ಅವಧಿ ಸೆಪ್ಟೆಂಬರ್ 22ಕ್ಕೆ ಕೊನೆಗೊಂಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಎನ್‌ಐ ಪ್ರಕಾರ, ವಿಜಯವಾಡದ ಎಸಿಬಿ ನ್ಯಾಯಾಲಯವು ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದೆ.

ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಅವರು ಹಗರಣದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದಕ್ಕೂ ಮುನ್ನ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿ ಎಪಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 22ಕ್ಕೆ ಮುಂದೂಡಿತ್ತು.

ಮತ್ತಷ್ಟು ಓದಿ: ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಇಂದು ಆಂಧ್ರ ಬಂದ್​ಗೆ ಕರೆ ನೀಡಿದ ಟಿಡಿಪಿ

ನಾಯ್ಡು ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಟಿಡಿಪಿ ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಎಪಿ ವಿಧಾನಸಭೆಯನ್ನು ಅಲ್ಪಾವಧಿಗೆ ಮುಂದೂಡಲಾಯಿತು. ಇದು ಸತತ ಎರಡನೇ ದಿನವೂ ವಿಧಾನಸಭೆ ಕಲಾಪಕ್ಕೆ ಅಡ್ಡಿ ಉಂಟಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:23 pm, Fri, 22 September 23