AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ಗೆ ‘ಕೈ’ ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅಸ್ಸಾಂ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಹೇಳಿದ್ದರು. ಅವರ ರಾಜೀನಾಮೆಯನ್ನು ಹೈಕಮಾಂಡ್ ಸ್ವೀಕರಿಸಿರಲಿಲ್ಲ. ಈ ನಿರ್ಧಾರ ಬದಲಾಯಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಮನವೊಲಿಕೆಗೆ ಮುಂದಾಗಿದ್ದರು. ಆದರೆ, ಕೊನೆಗೂ ಕಾಂಗ್ರೆಸ್ ತೊರೆಯುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿರುವ ಭೂಪೇನ್ ಬೋರಾ ಸಿಎಂ ಹಿಮಂತ ಶರ್ಮಾ ಅವರನ್ನು ಭೇಟಿಯಾಗಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್​​ಗೆ 'ಕೈ' ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ
Himanta Biswa Sarma With Bhupen Borah
ಸುಷ್ಮಾ ಚಕ್ರೆ
|

Updated on: Feb 17, 2026 | 9:28 PM

Share

ನವದೆಹಲಿ, ಫೆಬ್ರವರಿ 17: ಅಸ್ಸಾಂ ರಾಜ್ಯದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಂತ ಶರ್ಮಾ, ಭೂಪೇನ್ ಬೋರಾ ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಅವರೊಂದಿಗೆ, ಗುವಾಹಟಿ ಮತ್ತು ಉತ್ತರ ಲಖಿಂಪುರದಲ್ಲಿ ಹಲವು ಕಾಂಗ್ರೆಸ್ ನಾಯಕರು ಕೂಡ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.”

“ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಲಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಈಗಾಗಲೇ ಭೂಪೇನ್ ಬೋರಾ ಅವರ ಸೇರ್ಪಡೆಯನ್ನು ಅನುಮೋದಿಸಿದ್ದಾರೆ. ನಮ್ಮ ಪಕ್ಷದಲ್ಲಿ ಭೂಪೇನ್ ಬೋರಾ ಅವರಿಗೆ ಎಲ್ಲಾ ಗೌರವ ಮತ್ತು ಘನತೆಯನ್ನು ನೀಡಲಾಗುವುದು. ಭೂಪೇನ್ ಬೋರಾ ಕಾಂಗ್ರೆಸ್‌ನಲ್ಲಿ ದೀರ್ಘಕಾಲದಿಂದ ಕಷ್ಟಪಟ್ಟಿದ್ದಾರೆ. ಈಗ ಅವರು ಬಯಸಿದ್ದನ್ನು ಮಾಡಲು ಬಿಜೆಪಿಯಲ್ಲಿ ಅವರಿಗೆ ವೇದಿಕೆ ಸಿಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ, ಗುವಾಹಟಿಯ ಘೋರಾಮರ ಪ್ರದೇಶದಲ್ಲಿರುವ ಭೂಪೇನ್ ಬೋರಾ ಅವರ ನಿವಾಸಕ್ಕೆ ಸಿಎಂ ಹಿಮಂತ ಬಿಸ್ವ ಶರ್ಮಾ ಭೇಟಿ ನೀಡಿದರು. ಈ ಭೇಟಿಯ ಸಮಯದಲ್ಲಿ ಬೋರಾ ಅವರ ಪತ್ನಿ ಮತ್ತು ಮಗ ಮುಖ್ಯಮಂತ್ರಿಗೆ ಆರತಿ ಮಾಡಿ ಸ್ವಾಗತಿಸಿದರು. ಭೂಪೇನ್ ಬೋರಾ ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

ಆದರೆ ಪಕ್ಷದ ಹೈಕಮಾಂಡ್ ಅವರ ರಾಜೀನಾಮೆಯನ್ನು ಸ್ವೀಕರಿಸಲಿಲ್ಲ. ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿತು. ಇದರ ನಂತರ, ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಕೋರಿದ್ದರು. ಆದರೆ, ಅವರು ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಬದಲಾಯಿಸಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ