ರಸ್ತೆ ಅಪಘಾತದಲ್ಲಿ ಟಾಟಾ ಗ್ರೂಪ್​ನ ಮಾಜಿ ಅಧ್ಯಕ್ಷ ಸೈರಸ್​ ಮಿಸ್ತ್ರಿ ಸಾವು

ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ರಸ್ತೆ ಅಪಘಾತದಲ್ಲಿ ಟಾಟಾ ಗ್ರೂಪ್​ನ ಮಾಜಿ ಅಧ್ಯಕ್ಷ ಸೈರಸ್​ ಮಿಸ್ತ್ರಿ ಸಾವು
ಸೈರಸ್​ ಮಿಸ್ತ್ರಿ
Follow us
TV9 Web
| Updated By: ಆಯೇಷಾ ಬಾನು

Updated on:Sep 04, 2022 | 5:52 PM

ದೆಹಲಿ: ಟಾಟಾ ಗ್ರೂಪ್​ನ ಮಾಜಿ ಅಧ್ಯಕ್ಷ ಸೈರಸ್​ ಮಿಸ್ತ್ರಿ(54) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಪಾಲ್ಘರ್​ಗೆ ತೆರಳುತ್ತಿದ್ದಾಗ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು ಉದ್ಯಮಿ ಸೈರಸ್​ ಮಿಸ್ತ್ರಿ ಮೃತಪಟ್ಟಿದ್ದಾರೆ.

ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕಾರಿನ ಚಾಲಕ ಮತ್ತು ಮಿಸ್ತ್ರಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈರಸ್‌ ಮಿಸ್ತ್ರಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಭಾರತದ ಪ್ರಮುಖ ಸಂಸ್ಥೆ ಟಾಟಾ ಸನ್ಸ್‌ ಸಮೂಹದ ನೇತೃತ್ವ ವಹಿಸಿದ ನಂತರದಲ್ಲಿ ಸೈರಸ್‌ ಪಾಲೋನಜಿ ಮಿಸ್ತ್ರಿ ಅವರು ದೇಶದಾದ್ಯಂತ ಖ್ಯಾತಿ ಗಳಿಸಿದ್ದರು. ಟಾಟಾ ಸನ್ಸ್‌ನಲ್ಲಿ ಅತಿ ಹೆಚ್ಚು ಪಾಲುದಾರಿಕೆ ಹೊಂದಿರುವ ಶಾಪೂರ್ಜಿ ಪಾಲೋನಜಿ ಸಮೂಹದ ಪ್ರತಿನಿಧಿಯಾಗಿ ಸೈರಸ್‌ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ರತನ್‌ ಟಾಟಾ ಅವರು 2012ರಲ್ಲಿ ಕಂಪನಿಯ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು.

Published On - 5:16 pm, Sun, 4 September 22