AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khurshid: ಅಯೋಧ್ಯೆ ತೀರ್ಪು ಕುರಿತು ಪುಸ್ತಕ ಬರೆದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನೈನಿತಾಲ್‌ನಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಮನೆಯ ಮೇಲೆ ಇಂದು ಬೆಂಕಿ ಹಚ್ಚಿ, ಧ್ವಂಸಗೊಳಿಸಲಾಗಿದೆ

Salman Khurshid: ಅಯೋಧ್ಯೆ ತೀರ್ಪು ಕುರಿತು ಪುಸ್ತಕ ಬರೆದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ
ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ
TV9 Web
| Edited By: |

Updated on: Nov 15, 2021 | 7:21 PM

Share

ನವದೆಹಲಿ: ಕೇಂದ್ರ ಸರ್ಕಾರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ (Salman Khurshid) ಕೆಲವು ದಿನಗಳ ಹಿಂದೆ ಅಯೋಧ್ಯೆ ತೀರ್ಪು ಕುರಿತು ಪುಸ್ತಕವೊಂದನ್ನು ಹೊರತಂದಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ‘ಸನ್‌ರೈಸ್ ಓವರ್ ಅಯೋಧ್ಯೆ’ ಪುಸ್ತಕದ (Sunrise Over Ayodhya Book) ಬಗ್ಗೆ ಹಲವರು ದಂಗೆದ್ದಿದ್ದಾರೆ. ಈ ಪರ-ವಿರೋಧದ ಹೇಳಿಕೆಗಳ ನಡುವೆ ನೈನಿತಾಲ್‌ನಲ್ಲಿರುವ ಸಲ್ಮಾನ್​ ಖುರ್ಷಿದ್ ಅವರ ಮನೆಗೆ ಇಂದು ಕಲ್ಲು ಹೊಡೆದು, ಬೆಂಕಿ ಹಚ್ಚಿದ್ದಾರೆ. ತಮ್ಮ ಪುಸ್ತಕದಲ್ಲಿ ಹಿಂದುತ್ವದ ಕುರಿತು ಪ್ರಸ್ತಾವನೆ ಮಾಡಿದ್ದರಿಂದ ಸಲ್ಮಾನ್ ಖುರ್ಷಿದ್ ಭಾರೀ ವಿರೋಧ ಎದುರಿಸಿದ್ದರು. 

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. ಆ ಸಮಯದಲ್ಲಿ ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿದೆ. ಈಗಾಗಲೇ ದೇಶದಲ್ಲಿ ಉದ್ಭವವಾಗಿರುವ ಧಾರ್ಮಿಕ ಸಂಧಿಗ್ಧತೆ ವಾತಾವರಣ ಇರುವುದರಿಂದ ಅದಕ್ಕೆ ಮುಲಾಮು ಹಚ್ಚಲು ಅಯೋಧ್ಯೆ ಕುರಿತು ಪುಸ್ತಕ ಬರೆದೆ ಎಂದು ಅವರು ಹೇಳಿದ್ದರು.

ಈ ಘಟನೆಯ ಬಗ್ಗೆ ಸಲ್ಮಾನ್ ಖುರ್ಷಿದ್ ಅವರೇ ಟ್ವಿಟ್ಟರ್​ನಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಬರೆದಿರುವ ಪುಸ್ತಕದಲ್ಲಿ ಹಿಂದುತ್ವವನ್ನು ಭಯೋತ್ಪಾದಕ ಸಂಘಟನೆಗಳಾದ ಐಸಿಸ್ ಮತ್ತು ಬೊಕೊ ಹರಾಮ್‌ನೊಂದಿಗೆ ಹೋಲಿಸಲಾಗಿದೆ. ಹೀಗಾಗಿ, ಅವರ ಪುಸ್ತಕವನ್ನು ಪ್ರಕಟಿಸಿದಾಗಿನಿಂದ ವಿರೋಧ ಹೆಚ್ಚಾಗಿದೆ.

ಈಗಾಗಲೇ ಹಿಂದುತ್ವದ ಕುರಿತು ಹೇಳಿಕೆ ನೀಡಿರುವ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪುಸ್ತಕದ ಪ್ರಕಟಣೆ ಮತ್ತು ಮಾರಾಟವನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಹಿಂದೂ ಪರರು ಅರ್ಜಿ ಸಲ್ಲಿಸಿದ್ದಾರೆ. ಪುಸ್ತಕದ 113ನೇ ಪುಟದಲ್ಲಿ ‘ದಿ ಕೇಸರಿ ಆಕಾಶ’ ಎಂಬ ಅಧ್ಯಾಯದಲ್ಲಿ ಹಿಂದೂ ಧರ್ಮವು ಹಿಂಸಾತ್ಮಕ, ಅಮಾನವೀಯ ಮತ್ತು ದಬ್ಬಾಳಿಕೆಯ ಧರ್ಮ ಎನ್ನಲಾಗಿದೆ. ತಮ್ಮ ಹೊಸ ಪುಸ್ತಕದಲ್ಲಿ ಹಿಂದುತ್ವ ಮತ್ತು ಐಸಿಸ್ ನಡುವೆ ಹೋಲಿಕೆ ಮಾಡಿದ್ದಕ್ಕೆ ಭಾರೀ ಆಕ್ರೋಶದ ನಡುವೆಯೇ ನೈನಿತಾಲ್‌ನಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಮನೆಯ ಮೇಲೆ ಇಂದು ಬೆಂಕಿ ಹಚ್ಚಿ, ಧ್ವಂಸಗೊಳಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖುರ್ಷಿದ್ ಪುಸ್ತಕದಲ್ಲಿ ವಿವಾದಾತ್ಮಕ ಅಂಶ; ಪುಸ್ತಕ ನಿಷೇಧಿಸುವಂತೆ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಅವರಿಗದು ಉತ್ಪ್ರೇಕ್ಷೆ ಆಗಿರಬಹುದು, ನನಗಲ್ಲ: ಹಿಂದುತ್ವದ ಬಗ್ಗೆ ಗುಲಾಂ ನಬಿ ಆಜಾದ್‌ರ ಹೇಳಿಕೆಗೆ ಸಲ್ಮಾನ್ ಖುರ್ಷಿದ್ ಪ್ರತಿಕ್ರಿಯೆ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?