ಮೊಮ್ಮಗನನ್ನು ಥಳಿಸಿದ್ದಕ್ಕೆ ಮಗನ ಮೇಲೆ ಗುಂಡು ಹಾರಿಸಿದ ಸಿಆರ್​ಪಿಎಫ್​ನ ನಿವೃತ್ತ ಯೋಧ

ಮೊಮ್ಮಗನಿಗೆ ಹೊಡೆದಿದ್ದಕ್ಕೆ ಕೋಪಗೊಂಡ ಅಜ್ಜ ತನ್ನ ಮಗನ ಮೇಲೆ ಗುಂಡು ಹಾರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೊಮ್ಮಗನನ್ನು ಥಳಿಸಿದ್ದಕ್ಕೆ ಮಗನ ಮೇಲೆ ಗುಂಡು ಹಾರಿಸಿದ ಸಿಆರ್​ಪಿಎಫ್​ನ ನಿವೃತ್ತ ಯೋಧ
ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on:Jul 10, 2024 | 11:33 AM

ಮೊಮ್ಮಗನನ್ನು ಥಳಿಸಿದ್ದಕ್ಕೆ ಸಿಆರ್​ಪಿಎಫ್​ನ ಮಾಜಿ ಯೋಧ ಮಗನಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 68 ವರ್ಷದ ಮಾಜಿ ಯೋಧರನ್ನು ಪೊಲೀಸರು ಬಂಧಿಸಿದ್ದಾರೆ. ಚಿಂತಾಮಣಿ ನಗರ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪ್ರಸ್ತುತ ಬ್ಯಾಂಕ್ ನಗದು ವ್ಯಾನ್‌ಗಳ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಸಿಆರ್​ಪಿಎಫ್​ನ ಮಾಜಿ ಯೋಧ, 4 ವರ್ಷ ವಯಸ್ಸಿನ ಮೊಮ್ಮಗನನ್ನು ಮಗ ಥಳಿಸಿಸುತ್ತಿರುವುದನ್ನು ಕಂಡು ಮಗ ಹಾಗೂ ಸೊಸೆ ಗದರಿದ್ದರು.

ವಿಷಯ ಉಲ್ಬಣಗೊಂಡು ಕೋಪದ ಭರದಲ್ಲಿ ಮಗನಿಗೆ ರೈಫಲ್​ನಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೆಲ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗುಂಡು ಆರೋಪಿಯ ಮಗನ ಕಾಲಿಗೆ ತಗುಲಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೊಮ್ಮಗನ ಶವ ನೋಡಿದ ಅಜ್ಜನಿಗೆ ಹೃದಯಾಘಾತ, ಒಟ್ಟಿಗೆ ಅಂತ್ಯಸಂಸ್ಕಾರ

ಆರೋಪಿಯನ್ನು ನಂತರ ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬಂಧಿಸಲಾಯಿತು ಎಂದು ಅವರು ಹೇಳಿದರು. ವಿಚಾರಣೆ ವೇಳೆ ಆರೋಪಿ ಪೊಲೀಸರಿಗೆ ತನ್ನ ಮೊಮ್ಮಗನ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ಕೋಪಗೊಂಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೊಮ್ಮಗನ ಸಾವನ್ನು ಕಂಡು ಹೃದಯಾಘಾತದಿಂದ ಪ್ರಾಣಬಿಟ್ಟ ಅಜ್ಜ ಮೊಮ್ಮಗ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಮೊಮ್ಮಗನ ಮೃತದೇಹ ನೋಡುತ್ತಿದ್ದಂತೆ ಅಜ್ಜ ಹೃದಯಾಘಾತದಿಂದ ಕುಸಿದುಬಿದ್ದು ಅಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 10 July 24

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ