Manish Sisodia: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಮತ್ತೆ ನ್ಯಾಯಾಂಗ ಬಂಧನದಲ್ಲಿ ಇರಿಸಲು ಕೋರ್ಟ್ ಆದೇಶ ನೀಡಿದೆ.
ದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ((Excise Policy Case) ಸಂಬಂಧಿಸಿದಂತೆ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲು ಕೋರ್ಟ್ ಆದೇಶ ನೀಡಿದೆ. ಮಾರ್ಚ್ 20ರವರೆಗೆ ಮನೀಶ್ ಸಿಸೋಡಿಯಾಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 14 ದಿನ ನ್ಯಾಯಾಂಗ ಬಂಧನಕ್ಕೆ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.
ಅಬಕಾರಿ ನೀತಿ ಪ್ರಕರಣಕದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಕಸ್ಟಡಿಯಲ್ಲಿ ಇಡಲಾಗಿತ್ತು. ಇಂದು ಕೋರ್ಟ್ಗೆ ಹಾಜರುಪಡಿಸಿದ ಬಳಿಕ 14 ದಿನ ಸಿಬಿಐ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಸಿಸೋಡಿಯಾ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಇನ್ನೂ 14 ದಿನ ಅವರನ್ನು ಕಸ್ಟಡಿಗೆ ನೀಡಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದರು. ಆದರೆ, 14 ದಿನಗಳ ಕಾಲ ಕಸ್ಟಡಿ ವಿಸ್ತರಣೆ ಮಾಡಲು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸಮ್ಮತಿಸಿಲ್ಲ. ಸಿಸೋಡಿಯಾ ಕಸ್ಟಡಿ ಅವಧಿ ಮುಗಿದಿದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಮಧ್ಯೆ, ಸಿಸೋಡಿಯಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಾರ್ಚ್ 10ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
Rouse Avenue Court sends Delhi’s former Deputy Chief Minister and AAP leader Manish Sisodia to judicial custody till March 20, in the case pertaining to Delhi excise policy case pic.twitter.com/uNbdZKmnRj
— ANI (@ANI) March 6, 2023
ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿತ್ತು. ನಂತರ ಅವರು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಫೆಬ್ರುವರಿ 26ರಂದು ಬಂಧಿಸಿತ್ತು. ಇದಾಗಿ ಎರಡು ದಿನಗಳ ನಂತರ ಅವರು ದೆಹಲಿ ಉಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಅರ್ಜಿಯನ್ನು ಕೆಳಹಂತದ ಕೋರ್ಟ್ ವಿಚಾರಣೆ ನಡೆಸಲಿ ಎಂದು ಹೇಳಿತ್ತು. ನಂತರ ಸಿಡೋಡಿಯಾ ಪರ ವಕೀಲರು ಹೈಕೋರ್ಟ್ಗೂ ಅರ್ಜಿ ಸಲ್ಲಿಸಿದ್ದರು.
Published On - 2:24 pm, Mon, 6 March 23