AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyendra Jain: ತಿಹಾರ್​ ಜೈಲಿನಲ್ಲಿ ಕುಸಿದುಬಿದ್ದ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಸತ್ಯೇಂದ್ರ ಜೈನ್(Satyendra Jain) ಇಂದು ಸ್ನಾನಗೃಹದಲ್ಲಿ ಕುಸಿದು ಬಿದ್ದ ಪರಿಣಾಮ ಅವರನ್ನು ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Satyendra Jain: ತಿಹಾರ್​ ಜೈಲಿನಲ್ಲಿ ಕುಸಿದುಬಿದ್ದ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲು
ಸತ್ಯೇಂದ್ರ ಜೈನ್
ನಯನಾ ರಾಜೀವ್
|

Updated on: May 25, 2023 | 10:24 AM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಸತ್ಯೇಂದ್ರ ಜೈನ್(Satyendra Jain) ಇಂದು ಸ್ನಾನಗೃಹದಲ್ಲಿ ಕುಸಿದು ಬಿದ್ದ ಪರಿಣಾಮ ಅವರನ್ನು ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ಯೇಂದ್ರ ಜೈನ್ ಅವರು ಮೂರು ದಿನಗಳಲ್ಲಿ ಈಗ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ, ಸೋಮವಾರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಸಫ್ದುರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಸಚಿವರಾಗಿದ್ದ 57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಮೇ 30ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Satyendar Jain: ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಸೂಕ್ತ ಸಾಕ್ಷಿಗಳಿವೆ ಎಂದ ನ್ಯಾಯಾಲಯ

ಕೊಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು.

ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿದ್ದ 4 ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ