AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕಾಂಗ ಸಭೆಯಿಂದ ಹೊರನಡೆದ ಹರ್ಯಾಣ ಮಾಜಿ ಗೃಹ ಸಚಿವ ಅನಿಲ್ ವಿಜ್, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಗೈರು

ನಾವು ನಾಳೆ ಮತ್ತು ಮರುದಿನವೂ ಅವರೊಂದಿಗೆ ಮತ್ತೆ ಮಾತನಾಡುತ್ತೇವೆ. ನಮ್ಮ ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಕೂಡ ಅವರೊಂದಿಗೆ ಮಾತನಾಡಲಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ಸಚಿವ ಸಂಪುಟದಲ್ಲಿ ಅನಿಲ್ ವಿಜ್ ಹೆಸರೂ ಇತ್ತು. ಆದರೆ ಕೆಲವು ಕಾರಣಗಳಿಂದ ರಾಜಭವನಕ್ಕೆ ಬರಲು ಸಾಧ್ಯವಾಗಲಿಲ್ಲ. ನಾವು ಅವರೊಂದಿಗೆ ಮಾತನಾಡುತ್ತೇವೆ. ಅವರು ಲಭ್ಯವಾದಾಗ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದ ಖಟ್ಟರ್

ಬಿಜೆಪಿ ಶಾಸಕಾಂಗ ಸಭೆಯಿಂದ ಹೊರನಡೆದ ಹರ್ಯಾಣ ಮಾಜಿ ಗೃಹ ಸಚಿವ ಅನಿಲ್ ವಿಜ್, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಗೈರು
ಅನಿಲ್ ವಿಜ್
ರಶ್ಮಿ ಕಲ್ಲಕಟ್ಟ
|

Updated on: Mar 12, 2024 | 9:12 PM

Share

ಚಂಡೀಗಢ ಮಾರ್ಚ್ 12: ಮಂಗಳವಾರ ಹೊಸದಾಗಿ ರಚನೆಯಾದ ನಯಾಬ್ ಸಿಂಗ್ ಸೈನಿ (Nayab Singh Saini) ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ಹರ್ಯಾಣದ ಮಾಜಿ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾದ ಅನಿಲ್ ವಿಜ್ (Anil Vij), ಶಾಸಕಾಂಗ ಪಕ್ಷದ ಸಭೆಯಿಂದ ಹೊರ ನಡೆದಿದ್ದು, ಪ್ರಮಾಣ ವಚನಕ್ಕೆ ಸಮಾರಂಭಕ್ಕೆ ಗೈರಾಗಿದ್ದು ಊಹಾಪೋಹಗಳಿಗೆ ಕಾರಣವಾಗಿದೆ. ಅವರನ್ನು ಸಮಾಧಾನಪಡಿಸಲು ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಸೇರಿದಂತೆ ಬಿಜೆಪಿ ನಾಯಕತ್ವದ ಪ್ರಯತ್ನಗಳು ನಡೆದಿದ್ದರೂ, ವಿಜ್ ಅವರು ಪಟ್ಟುಬಿಡದೆ, ಸಭೆಯನ್ನು ತೊರೆದು ತಮ್ಮ ಖಾಸಗಿ ವಾಹನದಲ್ಲಿ ಅಂಬಾಲಾದ ತಮ್ಮ ಮನೆಗೆ ಮರಳಿದರು.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದಾಗ ವಿಜ್ ತನ್ನ ಅಣ್ಣನ ಮೊಮ್ಮಗಳ ಜೊತೆ ಆಟವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಂಬಾಲಾದ ಅವರ ಮನೆಯಲ್ಲಿ ಹಲವಾರು ಬೆಂಬಲಿಗರು ಜಮಾಯಿಸಿದರು. ಅಲ್ಲಿ ಮಾಧ್ಯಮಗಳೊಂದಿಗೆ ಸಂಕ್ಷಿಪ್ತವಾಗಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು.

2014 ರ ಮೊದಲು ಭಾರತಕ್ಕೆ ಬಂದ ಜನರಿಗೆ ಇಲ್ಲಿ ಯಾವುದೇ ಹಕ್ಕುಗಳಿಲ್ಲ, ಆದ್ದರಿಂದ ಅವರು ಗೌರವದಿಂದ ಬದುಕಲು ಮತ್ತು ತಮ್ಮ ಮಕ್ಕಳನ್ನು ಬೆಳೆಸಲು ಅವರಿಗೆ ಪೌರತ್ವವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಮಂಗಳವಾರದಂದು ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರಲ್ಲಿ ವಿಜ್ ಕೂಡ ಇದ್ದಾರೆ ಎಂದು ಸಂಜೆಯ ವೇಳೆಗೆ ಖಟ್ಟರ್ ಖಚಿತಪಡಿಸಿದ್ದು,”ಅವರು ಯಾವುದೋ ವಿಷಯದಿಂದ ಸಿಟ್ಟಾಗಿ ಹೊರಟುಹೋದರು” ಎಂದಿದ್ದಾರೆ.

“ಅನಿಲ್ ವಿಜ್ ನಮ್ಮ ಪಕ್ಷದ ಅತ್ಯಂತ ಬದ್ಧತೆ ಇರುವ ಹಿರಿಯ ಕಾರ್ಯಕರ್ತರು. 1990 ರಿಂದ ಅನಿಲ್ ವಿಜ್ ಮತ್ತು ನಾನು ಸಹಭಾಗಿತ್ವವನ್ನು ಹೊಂದಿದ್ದೇವೆ. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದಾಗಿನಿಂದ ನಾನು ಅವರೊಂದಿಗೆ ಕೆಲಸ ಮಾಡಿದ್ದೇನೆ. ಅವರು ಸಿಟ್ಟಾಗಿರುವ ಹಲವಾರು ನಿದರ್ಶನಗಳಿವೆ, ಆದರೆ ಅವರು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳಿದರು. ನಾವು ಇಂದು ಅವರೊಂದಿಗೆ ಮಾತನಾಡಿದ್ದೇವೆ, ಆದರೆ ಅವರು ಬರಲು ನಿರಾಕರಿಸಿದರು. ಅವರ ಆಶಯಕ್ಕೆ ವಿರುದ್ಧವಾಗಿ ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ಆದರೆ ಅದು ಅವರ ಸ್ವಭಾವ. ನಾವು ಅದನ್ನು ಅರ್ಥಮಾಡಿಕೊಳ್ಳುತ್ತೇವೆ. ಅವರು ಬೇಗನೆ ಸಿಟ್ಟಾಗುತ್ತಾರೆ ಆದರೆ ಶೀಘ್ರದಲ್ಲೇ ಸಾಮಾನ್ಯ ಸ್ಥಿತಿಗೆ ಬರುತ್ತಾರೆ ಎಂದಿದ್ದಾರೆ.

“ನಾವು ನಾಳೆ ಮತ್ತು ಮರುದಿನವೂ ಅವರೊಂದಿಗೆ ಮತ್ತೆ ಮಾತನಾಡುತ್ತೇವೆ. ನಮ್ಮ ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಕೂಡ ಅವರೊಂದಿಗೆ ಮಾತನಾಡಲಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ಸಚಿವ ಸಂಪುಟದಲ್ಲಿ ಅನಿಲ್ ವಿಜ್ ಹೆಸರೂ ಇತ್ತು. ಆದರೆ ಕೆಲವು ಕಾರಣಗಳಿಂದ ರಾಜಭವನಕ್ಕೆ ಬರಲು ಸಾಧ್ಯವಾಗಲಿಲ್ಲ. ನಾವು ಅವರೊಂದಿಗೆ ಮಾತನಾಡುತ್ತೇವೆ. ಅವರು ಲಭ್ಯವಾದಾಗ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ. ಸಂಪುಟಕ್ಕೆ ಇನ್ನಷ್ಟು ಹೊಸ ಮುಖಗಳು ಸೇರ್ಪಡೆಗೊಳ್ಳುವ ಬಗ್ಗೆ, ಪಕ್ಷದ ಸದಸ್ಯರೊಂದಿಗೆ ಸಮಾಲೋಚಿಸಿ ಹೊಸ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹಿರಿಯ ನಾಯಕತ್ವ ಮತ್ತು ಶೀಘ್ರದಲ್ಲೇ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ನಂತರ ಹೇಳಿದರು.

ಇದನ್ನೂ ಓದಿ: Nayab Singh Saini: ಹರ್ಯಾಣದ ಸಿಎಂ ಸ್ಥಾನಕ್ಕೇರಿದ ಬಿಜೆಪಿ ಮುಖ್ಯಸ್ಥ; ಯಾರು ಈ ನಯಾಬ್ ಸಿಂಗ್ ಸೈನಿ?

ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ವಿಜ್‌ಗೆ ಸಂತೋಷವಾಗಿಲ್ಲ ಮತ್ತು ಶಾಸಕಾಂಗ ಪಕ್ಷದ ಸಭೆಯಲ್ಲಿ ಅದರ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಆದಾಗ್ಯೂ, ಅವರನ್ನು ಸಂಪರ್ಕಿಸಲು ಪದೇ ಪದೇ ಪ್ರಯತ್ನಿಸಿದರೂ ಕರೆಗಳಿಗೆ ವಿಜ್ ಪ್ರತಿಕ್ರಿಯಿಸಲಿಲ್ಲ. ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ಏರಿಸಿರುವುದು ವಿಜ್‌ಗೆ ಸಂತೋಷವಾಗಿಲ್ಲ ಎಂದು ಅವರ ಆಪ್ತರು ದೃಢಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್