ಭ್ರಷ್ಟಾಚಾರ ಆರೋಪಗಳ ಬಗ್ಗೆ ಹೈಕೋರ್ಟ್​ ನ್ಯಾಯಮೂರ್ತಿಯಿಂದ ತನಿಖೆ: ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್

ಶಿವಸೇನೆಯ ಸಂಸದ ಸಂಜಯ್ ರಾವುತ್ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಭಾನುವಾರದ ಅಂಕಣ ‘ರೋಹ್​ತೊಕ್’ನಲ್ಲಿ​ ಅನಿಲ್ ದೇಶ್​ಮುಖ್ ಅವರನ್ನು ‘ಆಕ್ಸಿಡೆಂಟಲ್ ಹೋಂ ಮಿನಿಸ್ಟರ್’ ಎಂದು ಟೀಕಿಸಿದ್ದರು.

ಭ್ರಷ್ಟಾಚಾರ ಆರೋಪಗಳ ಬಗ್ಗೆ ಹೈಕೋರ್ಟ್​ ನ್ಯಾಯಮೂರ್ತಿಯಿಂದ ತನಿಖೆ: ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್
ಮಹಾರಾಷ್ಟ್ರದ ಗೃಹ ಸಚಿವ ಅನಿಲ್​ ದೇಶ್​ಮುಖ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 28, 2021 | 3:43 PM

ಮುಂಬೈ: ತಮ್ಮ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಆಯುಕ್ತ ಪರಮ್​ವೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ತನಿಖೆಯ ನಂತರ ಸತ್ಯ ಹೊರಬರಲಿದೆ ಎಂದು ಸಚಿವರು ನಾಗಪುರ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಮಾರ್ಚ್ 20ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದ ಹಿಂದಿನ ಮುಂಬೈ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್, ಗೃಹ ಸಚಿವ ಅನಿಲ್ ದೇಶ್​ಮುಖ್ ಮುಂಬೈ ಪೊಲೀಸ್ ಅಧಿಕಾರಿಗಳು ಪ್ರತಿತಿಂಗಳು ₹ 100 ಕೋಟಿ ಸಂಗ್ರಹಿಸಿ ಕೊಡಬೇಕು ಎಂಬ ಸೂಚನೆ ನೀಡಿದ್ದರು ಎಂದು ಆರೋಪಿಸಿದ್ದರು. ಈ ಪತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

ತಮ್ಮ ವಿರುದ್ಧದ ಆರೋಪಗಳನ್ನು ದೇಶ್​ಮುಖ್ ಸಾರಾಸಗಟಾಗಿ ನಿರಾಕರಿಸಿದ್ದರು. ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿದ್ದ ಪ್ರಕರಣ ನಿರ್ವಹಣೆಯಲ್ಲಿ ಆದ ಲೋಪಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಮಾರ್ಚ್ 17ರಂದು ಪರಮ್​ಬೀರ್ ಸಿಂಗ್ ಅವರನ್ನು ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ಅಷ್ಟೇನು ಮಹತ್ವವಿಲ್ಲದ ಹೋಂಗಾರ್ಡ್ಸ್​ ವಿಭಾಗಕ್ಕೆ ವರ್ಗಾಯಿಸಿತ್ತು.

‘ನನ್ನ ವಿರುದ್ಧ ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೋರಿದ್ದೇನೆ’ ಎಂದು ದೇಶ್​ಮುಖ್ ಭಾನುವಾರ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಲು ಒಪ್ಪಿಗೆ ಸೂಚಿಸಿದೆ. ಸತ್ಯ ಏನಿದ್ದರೂ ಹೊರಬರುತ್ತದೆ ಎಂದು ಹೇಳಿದರು.

ಶಿವಸೇನೆಯ ಸಂಸದ ಸಂಜಯ್ ರಾವುತ್ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಭಾನುವಾರದ ಅಂಕಣ ‘ರೋಹ್​ತೊಕ್’ನಲ್ಲಿ​ ಅನಿಲ್ ದೇಶ್​ಮುಖ್ ಅವರನ್ನು ‘ಆಕ್ಸಿಡೆಂಟಲ್ ಹೋಂ ಮಿನಿಸ್ಟರ್’ ಎಂದು ಟೀಕಿಸಿದ್ದರು. ಎನ್​ಸಿಪಿಯ ಹಿರಿಯ ನಾಯಕರಾದ ಜಯಂತ್ ಪಾಟೀಲ್ ಮತ್ತು ದಿಲೀಪ್ ವಾಲ್ಸೆ ಗೃಹಸಚಿವರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅನಿಲ್ ದೇಶ್​ಮುಖ್​ ಮಹಾರಾಷ್ಟ್ರದ ಗೃಹಸಚಿವರಾಗಿದ್ದರು ಎಂದು ಸಂಜಯ್ ರಾವುತ್ ಬರೆದಿದ್ದರು.

ಶಿವಸೇನೆ-ಎನ್​​ಸಿಪಿ-ಕಾಂಗ್ರೆಸ್​ ಮೈತ್ರಿ ಸರ್ಕಾರದಲ್ಲಿ ಡ್ಯಾಮೇಜ್ ಕಂಟ್ರೋಲ್​ ವ್ಯವಸ್ಥೆ ಇರಲಿಲ್ಲ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ತಿಂಗಳಿಗೆ ₹ 100 ಕೋಟಿ ಸಂಗ್ರಹಿಸಿಕೊಡುವಂತೆ ದೇಶ್​ಮುಖ್​ ಸೂಚಿಸಿದ್ದರು ಆರೋಪವನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಖಚಿತ ನಿಲುವು ಇರಲಿಲ್ಲ ಎಂದು ರಾವುತ್ ತಮ್ಮ ಅಂಕಣ ಬರಹದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 100 ಕೋಟಿ ವಸೂಲಿ ಆರೋಪದಿಂದ ದೋಸ್ತಿ ಸರ್ಕಾರಕ್ಕೆ ಧಕ್ಕೆಯಿಲ್ಲ, ಅನಿಲ್ ದೇಶ್​ಮುಖ್ ತನಿಖೆಯಾಗಲಿ: ಶರದ್ ಪವಾರ್

ಇದನ್ನೂ ಓದಿ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ