ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ. ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ […]

ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ
ಸಾಧು ಶ್ರೀನಾಥ್​ Edited By:

Updated on: Aug 16, 2020 | 7:10 PM

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ.

ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರೊನಾ ಸೋಂಕು: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಸ್ಥಿತಿ ಗಂಭೀರ..

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us