ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ

| Updated By: ganapathi bhat

Updated on: Oct 31, 2021 | 8:30 PM

Manmohan Singh: ಅಕ್ಟೋಬರ್ 13 ರಂದು ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ನಿತ್ರಾಣ ಹಾಗೂ ಸಾಮಾನ್ಯ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಅವರ ಆರೋಗ್ಯ ನೋಡಿಕೊಳ್ಳುತ್ತಿತ್ತು.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ
ಮನಮೋಹನ್ ಸಿಂಗ್
Follow us on

ದೆಹಲಿ: ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನವ ದೆಹಲಿಯ ಆಲ್ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ (AIIMS) ನಿಂದ ಭಾನುವಾರ ಬಿಡುಗಡೆ ಆಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು (ಅಕ್ಟೋಬರ್ 31) ಸಂಜೆ 5.20 ರ ಸುಮಾರಿಗೆ ಬಿಡುಗಡೆಯಾಗಿದ್ದಾರೆ. ಅವರು ಅನಾರೋಗ್ಯದಿಂದ ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ದೇಶದ ಉನ್ನತ ಆಸ್ಪತ್ರೆ ಏಮ್ಸ್​​ನಲ್ಲಿ ಕಳೆದ 18 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಕ್ಟೋಬರ್ 13 ರಂದು ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ನಿತ್ರಾಣ ಹಾಗೂ ಸಾಮಾನ್ಯ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಅವರ ಆರೋಗ್ಯ ನೋಡಿಕೊಳ್ಳುತ್ತಿತ್ತು. ಡಾ. ನಾಯ್ಕ್ ಹೃದ್ರೋಗ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ವೈದ್ಯರಾಗಿದ್ದಾರೆ.

ಡಾ. ಮನಮೋಹನ್ ಸಿಂಗ್ ಹೃದಯ ಸಂಬಂಧಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರಿಗೆ 2009 ರಲ್ಲಿ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಈ ವರ್ಷದ ಏಪ್ರಿಲ್​ನಲ್ಲಿ ಮನಮೋಹನ್ ಸಿಂಗ್ ಕೊರೊನಾಗೆ ತುತ್ತಾಗಿದ್ದರು. ಆ ಸಂದರ್ಭದಲ್ಲಿ ಕೂಡ ಅವರನ್ನು ಏಮ್ಸ್​​ಗೆ ದಾಖಲು ಮಾಡಲಾಗಿತ್ತು. ಮನಮೋಹನ್ ಸಿಂಗ್ ಸದ್ಯ ರಾಜ್ಯಸಭೆಯ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸುಧಾರಿಸಿದೆ: ಏಮ್ಸ್ ವೈದ್ಯರು

ಇದನ್ನೂ ಓದಿ: Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸ್ಥಿರ; ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಮೋದಿ

Published On - 8:29 pm, Sun, 31 October 21