[lazy-load-videos-and-sticky-control id=”fScqXlqYlQg”]
ದೆಹಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಹಾಗೂ ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಯಾರಿಗೂ ಸುಳಿವು ನೀಡದೆ ರಾಜೀನಾಮೆ ನೀಡಿದ್ರು. ಅವರ ರಾಜೀನಾಮೆಯಿಂದ ಲಕ್ಷಾಂತರ ಅಭಿಮಾನಿಗಳಿಗೆ ಬೇಸರವಾಗಿತ್ತು. ಆದರೆ ಅವರ ನಿರ್ಧಾರದ ಬಗ್ಗೆ ಅನೇಕ ಚರ್ಚೆಗಳಾಗಿದ್ದವು.
ಇಂದು ಕೆ.ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ದೆಹಲಿಯಲ್ಲಿ ಪಿ. ಮುರಳೀಧರ ರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿ ಆಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ, ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ರು. ಬಳಿಕ ಸ್ವಯಂ ನಿವೃತ್ತಿ ಪಡೆದಿದ್ರು. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ, ನಾನು ರಾಷ್ಟ್ರೀಯವಾದಿ. ತಮಿಳುನಾಡಿಗೆ ಬಿಜೆಪಿ ಹೊಸ ದೂರದೃಷ್ಟಿ, ದಿಕ್ಕು ನೀಡಲಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದ್ದಾರೆ.
Published On - 9:01 am, Tue, 25 August 20