Farooq Abdullah: ನ್ಯಾಷನಲ್ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ

ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ. ಡಿಸೆಂಬರ್ 5ರಂದು ಈ ಪಕ್ಷದ ಚುನಾವಣೆ ನಡೆಯಲಿದ್ದು, ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. 

Farooq Abdullah: ನ್ಯಾಷನಲ್ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ
ಫಾರೂಕ್ ಅಬ್ದುಲ್ಲಾ
Edited By:

Updated on: Nov 18, 2022 | 9:56 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಇಂದು ರಾಜೀನಾಮೆ ನೀಡಿದ್ದಾರೆ. ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಕೆಎನ್​ಸಿ ನಾಯಕ, “ನನ್ನ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ, ಇನ್ನು ಈ ಪಕ್ಷವನ್ನು ಮುನ್ನಡೆಸಲು ನನಗೆ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ. ಡಿಸೆಂಬರ್ 5ರಂದು ಈ ಪಕ್ಷದ ಚುನಾವಣೆ ನಡೆಯಲಿದ್ದು, ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಹೊಸ ಅಧ್ಯಕ್ಷರ ಆಯ್ಕೆಗೆ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದೆ. ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈಗ ಅವರ ತಂದೆ ಅಧಿಕಾರದಿಂದ ಕೆಳಗಿಳಿದ ನಂತರ ಹೊಸ ಮುಖ್ಯಸ್ಥರಾಗಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಚುನಾವಣೆ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ನಾಮಪತ್ರಗಳನ್ನು ಆಹ್ವಾನಿಸಲಾಗುವುದು ಎಂದು ಪಕ್ಷದ ಮುಖ್ಯ ವಕ್ತಾರ ತನ್ವಿರ್ ಸಾದಿಕ್ ಹೇಳಿದ್ದಾರೆ. ಹಜರತ್‌ಬಾಲ್‌ನಲ್ಲಿರುವ ಪಕ್ಷದ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯ ಬಳಿ ಚುನಾವಣೆ ನಡೆಯಲಿದೆ ಎಂದು ಸಾದಿಕ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ