AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಶ್ರೀನಗರದ ಆಸ್ಪತ್ರೆಗೆ ದಾಖಲು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ 87 ವರ್ಷದ ಫಾರೂಕ್ ಅಬ್ದುಲ್ಲಾ ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಾರೂಕ್ ಅಬ್ದುಲ್ಲಾ ಕಳೆದ ಕೆಲವು ದಿನಗಳಿಂದ ಆರೋಗ್ಯವಾಗಿರಲಿಲ್ಲ. ಈಗ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಶ್ರೀನಗರದ ಆಸ್ಪತ್ರೆಗೆ ದಾಖಲು
Farooq Abdullah
ಸುಷ್ಮಾ ಚಕ್ರೆ
|

Updated on: Oct 04, 2025 | 8:33 PM

Share

ಶ್ರೀನಗರ, ಅಕ್ಟೋಬರ್ 4: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಹೊಟ್ಟೆಯ ಸೋಂಕು ಕಾಣಿಸಿಕೊಂಡ ನಂತರ ಇಂದು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕರು ತಿಳಿಸಿದ್ದಾರೆ.

87 ವರ್ಷದ ಫಾರೂಕ್ ಅಬ್ದುಲ್ಲಾ ಅವರಿಗೆ ಈ ವಾರದ ಆರಂಭದಲ್ಲಿ ಹೊಟ್ಟೆಯ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಶ್ರೀನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ 2 ಬಾರಿ ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ; ಸಂಸತ್​​ನಲ್ಲಿ ಅಮಿತ್ ಶಾ ಘೋಷಣೆ

“ಫಾರೂಕ್ ಅಬ್ದುಲ್ಲಾ ಕಳೆದ ಕೆಲವು ದಿನಗಳಿಂದ ಆರೋಗ್ಯವಾಗಿರಲಿಲ್ಲ. ಈಗ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ” ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕರೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಫಾರೂಕ್ ಅವರ ಆರೋಗ್ಯ ಸರಿಯಾಗಿಲ್ಲದಿದ್ದರೂ, ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ, ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದನೆಯು 26 ಜೀವಗಳನ್ನು ಬಲಿ ತೆಗೆದುಕೊಂಡಿತು. ಅದರಲ್ಲಿ ಬಹುತೇಕರು ಪ್ರವಾಸಿಗರಾಗಿದ್ದರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ 4 ದಿನಗಳ ಮಿಲಿಟರಿ ಸಂಘರ್ಷಕ್ಕೆ ಕಾರಣವಾಯಿತು. ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸಿದ್ದಕ್ಕೆ ಅವರು ತಮ್ಮ ಮಗ ಒಮರ್ ಅಬ್ದುಲ್ಲಾ ಅವರ ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ