Ajay Alok: ನಿತೀಶ್ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್ ಬಿಜೆಪಿಗೆ ಸೇರ್ಪಡೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಅಜಯ್ ಅಲೋಕ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತರಾಗಿದ್ದ ಅಜಯ್ ಅಲೋಕ್(Ajay Alok) ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವರದಿಗಳ ಪ್ರಕಾರ, ಅಜಯ್ ಅಲೋಕ್ ಅವರನ್ನು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನುವ ಆರೋಪದ ಮೇರೆಗೆ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು. 2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಮತ್ತು ಜೆಡಿಯು ನಡುವೆ ನಡೆಯುತ್ತಿರುವ ರಾಜಕೀಯ ಯುದ್ಧಕ್ಕೆ ಮತ್ತಷ್ಟು ಪುಷ್ಠಿ ನೀಡದಂತಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:11 pm, Fri, 28 April 23